ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಸಚಿವ ಎಂ.ಬಿ.ಪಾಟೀಲ್ ಲಾಬಿ

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ತೀವ್ರ ಲಾಬಿ ನಡೆಸುತ್ತಿದ್ದು, ಪ್ರತ್ಯೇಕ ಧರ್ಮದ ಬೇಡಿಕೆ ಪರಿಶೀಲಿಸುವುದಕ್ಕಾಗಿ ತಜ್ಞರ ಸಮಿತಿ ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಮವಾರ ಒತ್ತಾಯಿಸಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಂಬಂಧಿಸಿದಂತೆ 18 ಕೋರ್ಟ್ ತೀರ್ಪುಗಳು, ಗೆಜೆಟ್ ಗಳು ಹಾಗೂ ಐತಿಹಾಸಿಕ ದಾಖಲೆಗಳನ್ನೊಳಗೊಂಡ ಮನವಿಯೊಂದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾವು ಸಲ್ಲಿಸಿದ್ದೇವೆ ಮತ್ತು ಈ ಸಂಬಂಧ ತಜ್ಞರ ಸಮಿತಿ ರಚಿಸಿಸುವಂತೆ ಮನವಿ ಮಾಡಿದ್ದೇವೆ. ತಜ್ಞರ ಸಮಿತಿ ಶಿಫಾರಸು ಆಧಾರಸಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಲಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
2013ರಲ್ಲಿ ಜೈನರಿಗೆ ಪ್ರತ್ಯೇಕ ಧರ್ಮ ನೀಡಿದ ರೀತಿಯಲ್ಲೇ ಲಿಂಗಾಯತರನ್ನು ಪ್ರತ್ಯೇಕವಾಗಿ ಗುರುತಿಸುವುದಕ್ಕಾಗಿ ಪ್ರತ್ಯೇಕ ಧರ್ಮದ ಅಗತ್ಯವಿದೆ. ಇದರಿಂದ ಲಿಂಗಾಯಿತರಿಗೆ ಮತ್ತು ಸಮುದಾಯದ ಉಪ ಜಾತಿಯ ಜನಕ್ಕೆ ಹಲವು ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.ದಕ್ಷಿಣ ಭಾರತದ ಸುಮಾರು ಐದು ರಾಜ್ಯಗಳಲ್ಲಿ ಲಿಂಗಾಯಿತರು ಇದ್ದಾರೆ. ಶೇ.90ರಷ್ಟು ಲಿಂಗಾಯತರು ಪ್ರತ್ಯೇಕ ಧರ್ಮದ ಬೇಡಿಕೆಯನ್ನು ಬೆಂಬಲಿಸಿದ್ದಾರೆ ಎಂದು ಪಾಟೀಲ್ ತಿಳಿಸಿದ್ದಾರೆ.
Comments