ಮಂಗಳೂರು ಚಲೋಗೆ ‘ಹ್ಯಾಂಡ್’ ಬ್ರೇಕ್: ಶನಿವಾರ ಕರ್ನಾಟಕ ಬಂದ್?

ಬೆಂಗಳೂರು: ಯುವ ಮೋರ್ಚಾದ ಮಂಗಳೂರು ಚಲೋ ಬೈಕ್ ರ್ಯಾಲಿಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಆಕ್ರೋಷಗೊಂಡಿರುವ ರಾಜ್ಯ ಬಿಜೆಪಿ ನಾಯಕರು ಸೆಪ್ಟೆಂಬರ್ 9 ರಂದು ಕರ್ನಾಟಕ ಬಂದ್ ನಡೆಸಲು ಚಿಂತನೆ ನಡೆಸಿದ್ದಾರೆ.
ಬೆಂಗಳೂರು ಮತ್ತು ರಾಜ್ಯದ ಹಲವು ಕಡೆಗಳಲ್ಲಿ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕ್ರಮವನ್ನು ಟೀಕಿಸಿ ಬಂದ್ ಕರೆ ನೀಡಲು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಸಿಕ್ಕಿದೆ.
ಏನಿದು ಮಂಗಳೂರು ಚಲೋ? ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಹಿಂದೆ ಪಿಎಫ್‍ಐ ಸಂಘಟನೆ ಭಾಗಿಯಾಗಿದ್ದು, ಇದನ್ನು ನಿಷೇಧಿಸುವ ಸಲುವಾಗಿ ಸೆಪ್ಟೆಂಬರ್ 7 ರಂದು ಬಿಜೆಪಿ ಯುವಾ ಮೋರ್ಚಾ ಮಂಗಳೂರು ಚಲೋವನ್ನು ಆಯೋಜಿಸಿತ್ತು. ಕೆಎಫ್ ಡಿ, ಪಿಎಫ್‍ಐ ಸಂಘಟನೆ ನಿಷೇಧಕ್ಕೆ ಒತ್ತಾಯಿಸಿ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲು ಈ ರ‍್ಯಾಲಿಯನ್ನು ಬಿಜೆಪಿ ಆಯೋಜಿಸಿತ್ತು.
Comments