ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪಗೆ ಬೆದರಿಕೆ ಕರೆ: ದೂರು ದಾಖಲು

ಶಿವಮೊಗ್ಗ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಕರೆ ಮಾಡಿ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ರಕ್ಷಣೆ ಕೋರಿ ದೂರು ದಾಖಲಿಸಿದ್ದಾರೆ.
ಸೆ. 5ರಂದು ಮಧ್ಯಾಹ್ನ 2.30ಕ್ಕೆ ಕರೆ ಬಂದಿತ್ತು. ನೀನು ಮುಸ್ಲಿಂ ವಿರೋಧಿ,ಹಿಂದೂಗಳ ಪರವಾಗಿ ಹೋರಾಟ ನಡೆಸುತ್ತೀಯಾ. ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ.ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದೇ ವೇಳೆ ಆತನಿಗೆ ಪ್ರತ್ಯುತ್ತರ ನೀಡಿದ ಈಶ್ವರಪ್ಪ, ತಾಕತ್ತಿದ್ದರೇ ಫೋನ್ ಬಿಟ್ಟು ಎದುರಿಗೆ ಬಂದು ಮಾತನಾಡು ಎಂದು ಹೇಳಿದ್ದಾರೆ.
ಕರೆ ಮಾಡಿದ ವ್ಯಕ್ತಿಯನ್ನು ಪತ್ತೆ ಹಚ್ಚಿ ಬಂಧಿಸಬೇಕು. ಕಾನೂನು ಕ್ರಮ ಜರುಗಿಸಬೇಕು’ ಎಂದು ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಅವರಿಗೆ ನೀಡಿದ ದೂರಿನಲ್ಲಿ ಈಶ್ವರಪ್ಪ ಒತ್ತಾಯಿಸಿದ್ದಾರೆ.ಈ ಹಿಂದೆಯೂ ತಮಗೆ ಬೆದರಿಕೆ ಕರೆ ಬಂದಿತ್ತು. ಈ ವಿಷಯವನ್ನು ನಾನು ಗೃಹ ಸಚಿವ ಪರಮೇಶ್ವರ್ ಅವರ ಗಮನಕ್ಕೆ ತಂದಿದ್ದೆ. ಆದರೆ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
Comments