ಪೋಷಕರೇ ಎಚ್ಚರ ! ಡೆಡ್ಲಿ ಗೇಮ್ ಆಟವಾಡಲು ಹುಡುಕಾಟದಲ್ಲಿ ಮೈಸೂರು ಮೊದಲು !

ಡೆಡ್ಲಿ ಗೇಮ್ ಬ್ಲೂವೇಲ್‍ಗೆ ಆಟವಾಡಲು ಹುಡುಕಾಟ ನಡೆಸಿರುವುದರಲ್ಲಿ ಸಾಂಸ್ಕøತಿಕ ನಗರಿ ಮೈಸೂರು ರಾಜ್ಯದಲ್ಲಿ ಮೊದಲನೇ ಸ್ಥಾನಲ್ಲಿರುವುದು ಆಘಾತಕಾರಿ ವಿಷಯವಾಗಿದೆ.
ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತ ಶಿಕ್ಷಣ ಇಲಾಖೆ ನಗರ ಹಾಗೂ ಜಿಲ್ಲೆಯಾದ್ಯಂತ 3387 ಶಾಲೆಗಳಲ್ಲಿ ಬ್ಲೂವೇಲ್ ಬಗ್ಗೆ ಜಾಗೃತಿ ಮೂಡಿಸಲು ಸುತ್ತೋಲೆ ಹೊರಡಿಸಿದೆ. ಇಲಾಖೆಗೆ ಬಂದ ಮಾಹಿತಿ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ.ಬಿ.ಕೆ.ಎಸ್.ವರ್ಧನ್ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಈ ಕುರಿತು ಸುತ್ತೋಲೆ ಕಳುಹಿಸಿದ್ದಾರೆ.
ಶಾಲೆಯ ಮುಖ್ಯಸ್ಥರು ಪ್ರಾರ್ಥನೆ ಸಂದರ್ಭದಲ್ಲಿ ಬ್ಲೂವೇಲ್ ಗೇಮ್ ಬಗ್ಗೆ ಜಾಗೃತಿ ಮೂಡಿಸಿ ಇದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸಿಕೊಡುವಂತೆ ಆದೇಶಿಸಿದ್ದಾರೆ. ಬ್ಲೂವೇಲ್ ಗೇಮ್‍ಗಾಗಿ ಹುಡುಕಾಟ ನಡೆಸಿದ ದೇಶಗಳ ಪೈಕಿ ಭಾರತ 9ನೇ ಸ್ಥಾನದಲ್ಲಿದ್ದು, ಅದರಲ್ಲಿ ಮೈಸೂರು ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿರುವುದು ಆತಂಕಕಾರಿ ವಿಷಯವಾಗಿದೆ.ಕಳೆದ ಮೂರು ತಿಂಗಳ ಅವಧಿಯಲ್ಲಿ ಮೈಸೂರಿನಲ್ಲಿ ಅತಿ ಹೆಚ್ಚು ಮಂದಿ ಬ್ಲೂವೇಲ್ ಆಡಲು ಹುಡುಕಾಟ ನಡೆಸಿರುವುದಾಗಿ ತಿಳಿದು ಬಂದಿದೆ.
Comments