ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದು ಬೇಡ ಅಂದ್ರು ಆದ್ರೆ ಈಗ ಬೇಕು ಅಂತಿದ್ದಾರೆ !!
ಅಂದು ಪ್ರತಿಪಕ್ಷದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಬಳ್ಳಾರಿಗೆ ಪಾದಯಾತ್ರೆ ಕೈಗೊಂಡ ಸಂದರ್ಭದಲ್ಲಿ ಬಹಿರಂಗ ಸಮಾವೇಶ ದಲ್ಲಿ ಯಾವುದೇ ಕಾರಣಕ್ಕೂ ವಿಮಾನ ನಿಲ್ದಾಣ ಮಾಡಲು ಬಿಡುವುದಿಲ್ಲ ಎಂದಿದ್ದರು…
ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ಬೇಡ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ಮೇಲೆ ತಾವೇ ನಿಲ್ದಾಣಕ್ಕೆ ಅಧಿಸೂಚನೆ ಹೊರಡಿಸುವ ಮೂಲಕ ದ್ವಿಮುಖ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.ಜನಾರ್ಧನರೆಡ್ಡಿ ಅವರು ರೈತರ ವಿರೋಧದ ನಡುವೆಯೂ ಬಳ್ಳಾರಿ ತಾಲೂಕಿನ ಸಿರಿವಾರ ಮತ್ತು ಚಾಗನೂರು ಗ್ರಾಮಕ್ಕೆ ಸೇರಿದ 900 ಎಕರೆ ನೀರಾವರಿ ಪ್ರದೇಶದಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ಕೆಐಡಿಬಿಯಿಂದ ಭೂಸ್ವಾಧೀನ ಪ್ರಕ್ರಿಯೆ ನಡೆದಿತ್ತು. ಇದನ್ನು ವಿರೋಧಿಸಿ ರೈತರು ಹೋರಾಟ ನಡೆಸಿ ನ್ಯಾಯಾಲಯದ ಮೆಟ್ಟಿಲೇರಿ ಭೂಸ್ವಾಧೀನಕ್ಕೆ ತಡೆಯಾಜ್ಞೆ ತಂದಿದ್ದರು.
ಆದರೆ ಇಂದು ಸಿಎಂ ಆಗ್ತಿದ್ದಂತೆ ತಾನು ನೀಡಿದ್ದ ಮಾತನ್ನು ಮರೆತು ವಿಮಾನ ನಿಲ್ದಾಣಕ್ಕೆ ಅದಿಸೂಚನೆ ಹೊರಡಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಿರಿವಾರ ಮತ್ತು ಚಾಗನೂರು ಗ್ರಾಮದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Comments