ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 75,000 ರೂ ವೇತನ

ನವದೆಹಲಿ: ದೇಶಾದಂತ್ಯ ಇರುವ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಿಂಗಳಿಗೆ 75,000 ರೂ ಸಿಗಲಿದೆ.
ನವದೆಹಲಿ: ದೇಶಾದಂತ್ಯ ಇರುವ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಿಂಗಳಿಗೆ 75,000 ರೂ ಸಿಗಲಿದೆ. ಈ ಕುರಿತು ಕೇಂದ್ರ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ. ಪ್ರಧಾನಿ ಸ್ಕಾಲರ್ ಶಿಪ್ ಎಂಬ ಹೆಸರಿನಲ್ಲಿ ಯೋಜನೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಆರಂಭ ಮಾಡಲಿದೆ ಎಂದು ತಿಳಿಸಿದ್ದಾರೆ.
ಸುಮಂತ ಸಿನ್ಹಾ ರಿನ್ಯೂ ಸೆಂಟರ್ ಆಫ್ ಎಕ್ಸಲೆನ್ಸಿ ಉದ್ಘಾಟನಾ ಸಮಾರಂಭದ ಬಳಿಕ ಅವರು ಮಾತನಾಡಿದರು. ಈ ಯೋಜನೆಯಿಂದ ಐಐಟಿ, ವಿಶ್ವವಿದ್ಯಾಲಯಗಳಲ್ಲಿ ಪ್ರತಿಭಾವಂತ ಸಂಶೋಧನಾ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ ಎಂದಿದ್ದಾರೆ. ದೇಶಾದ್ಯಂತ ಇರುವ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅತ್ಯಂತ ಪ್ರತಿಭಾವಂತ ಟಾಪ್ ಸಾವಿರ ಮಂದಿಗೆ ತಲಾ 75 ಸಾವಿರ ವಿದ್ಯಾರ್ಥಿ ವೇತನ ನೀಡಲಿರುವುದಾಗಿ ತಿಳಿಸಿದರು. ಇದು ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಎಂದು ತಿಳಿಸಿದರು.
Comments