ರಾಜ್ಯದೆಲ್ಲೆಡೆ ಮಳೆಯ ಅವಾಂತರಕ್ಕೆ ತತ್ತರಿಸುತ್ತಿರುವ ಜನರು
ರಾಜ್ಯದೆಲ್ಲೆಡೆ ಮಳೆಯ ಅಬ್ಬರ ಜೋರಾಗಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಬಳ್ಳಾರಿಯಲ್ಲಿ ಭಾರೀ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಸತತ 5 ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಜನ ತತ್ತರಿಸುತ್ತಿದ್ದಾರೆ. ಕರಾವಳಿ ಭಾಗದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಹೊನ್ನಾವರ ತಾಲ್ಲೂಕುಗಳು ಹಾಗೂ ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಭಾರಿ ಮಳೆಯಾಗಿದೆ. ಬಳ್ಳಾರಿಯಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ 4 ಮನೆಗಳು ಕುಸಿದಿವೆ. ರಾಯಚೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗಿ ಜಮೀನು, ಗದ್ದೆಗಳು ಜಲಾವೃತಗೊಂಡಿವೆ. ತುಮಕೂರು ಜಿಲ್ಲೆಯಲ್ಲಿಯೂ ಮಳೆ ಅಬ್ಬರ ಜೋರಾಗಿದೆ. ಚಿತ್ರದುರ್ಗ ಜಿಲ್ಲೆಯ ಅನೇಕ ಪ್ರದೇಶಗಳಲ್ಲಿ ಮಳೆಯಾಗಿದ್ದು, ಕೆರೆ, ಹಳ್ಳ ಕೊಳ್ಳಗಳು ತುಂಬಿವೆ.
Comments