ರಾಜ್ಯದಾದ್ಯಂತ ಭಾರಿ ಮಳೆ, ನೀರಲ್ಲಿ ಕೊಚ್ಚಿ ಹೋದ ತಾಯಿ ಮಗಳು
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಕೊಪ್ಪಳದಲ್ಲಿ ತಾಯಿ ಮಗಳು ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಿನ್ನೆ ರಾತ್ರಿ ನಡೆದಿದೆ.ಕುಷ್ಠಗಿಯ ಬೊಮ್ಮನಾಳದಲ್ಲಿ ಹನುಮವ್ವ(50),ಪಾರವ್ವ ನೀರಿನಲ್ಲಿ ಕೊಚ್ಚಿ ಹೋಗಿದ್ದು ಭಾನುವಾರ ಬೆಳಗ್ಗೆ ಹನುಮವ್ವ ಶವ ಪತ್ತೆಯಾಗಿದೆ. ಪಾರವ್ವ ಶವಕ್ಕಾಗಿ ಶೋಧ ಕಾರ್ಯಾಚರಣೆ ನಡೆದಿದೆ.
ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯು ಭಾರ ಕುಸಿತ ಇದ್ದ ಕಾರಣ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಇನ್ನೆರಡು ದಿನ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ನಗರದಲ್ಲಿ ಭಾನುವಾರ ಬೆಳಗ್ಗೆ ಮಳೆ ಸುರಿಯುತ್ತಿದ್ದು ಹಲವು ರಸ್ತೆಗಳು ಜಲಾವೃತವಾಗಿ ಕೆರೆಗಳಂತಾಗಿವೆ. ತಗ್ಗು ಪ್ರದೇಶದ ಜನರಲ್ಲಿ ತೀವ್ರ ಆತಂಕ ಮನೆ ಮಾಡಿದೆ
Comments