ಗೋವಾದಲ್ಲಿ ಇನ್ನುಮುಂದೆ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಬ್ಯಾನ್ ಮಾಡಲಾಗುವುದಂತೆ ??

ಗೋವಾಕ್ಕೆ ನೀವು ಮುಂದೆ ಹೋಗ್ತೀರಾ. ಹಾಗಾದ್ರೆ ಹುಷಾರಾಗಿರಿ. ಹೌದು ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವುದನ್ನು ನಿಷೇಧಿಸಲು ಗೋವಾ ಸರ್ಕಾರ ಮುಂದಾಗಿದೆ.
ಕೆಲವರು ರಸ್ತೆ ಮಾರ್ಗದಲ್ಲಿ ಕುಡಿಯುತ್ತಾ ಕುಳಿತಿರುತ್ತಾರೆ ಜೊತೆಗೆ ಕುಡಿದ ನಂತರ ಬಾಟಲ್‍ಗಳನ್ನು ರಸ್ತೆಯಲ್ಲಿಯೇ ಬಿಸಾಡುತ್ತಾರೆ. ಇದರಿಂದ ಸಮಸ್ಯೆಗಳು ಸೃಷ್ಟಿಯಾಗುತ್ತವೆ. ಈ ಸಮಸ್ಯೆ ನಿವಾರಣೆಗಾಗಿ ಸಭೆ ಕರೆದು ಅಧಿಕೃತ ಸುತ್ತೋಲೆಯನ್ನು ಹೊರಡಿಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹೇಳಿದ್ದಾರೆ.`ಯಾರು ಕುಡಿಯಲು ಬಯಸುತ್ತಾರೋ ಅವರು ಬಾರ್‍ನ ಒಳಗೆ ಕುಡಿಯಲಿ. ಸಾರ್ವಜನಿಕ ಸ್ಥಳಗಳಲ್ಲಿ ಅಲ್ಲ’. ಮುಂದಿನ 15 ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ನಿಷೇಧಿಸುವಂತೆ ನಾನು ಸರ್ಕಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತೇನೆ ಎಂದು `ಸ್ವಚ್ಛ ಭಾರತ’ ಕಾರ್ಯಕ್ರಮವೊಂದರಲ್ಲಿ ತಿಳಿಸಿದರು.
ಮದ್ಯಪಾನ ಅಂಗಡಿಗಳು ಸಮೀಪದ ಸಾರ್ವಜನಿಕ ಸ್ಥಳಗಳಲ್ಲಿ ಕುಡಿಯಲು ಅವಕಾಶ ಮಾಡಿಕೊಟ್ಟರೆ ಅಂತಹ ಶಾಪ್‍ಗಳಿಗೆ ಸರ್ಕಾರ ದಂಡ ವಿಧಿಸಲಾಗುತ್ತದೆ ಅಥವಾ ಪರವಾನಗಿಯನ್ನು ರದ್ದು ಮಾಡಲಾಗುವುದು ಎಂದು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.ಮೇ ತಿಂಗಳಿನಿಂದ ಪೊಲೀಸರು ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವವರ ವಿರುದ್ಧ ಶಿಸ್ತುಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಕೆಲವರನ್ನು ಬಂಧಿಸುತ್ತಿದ್ದಾರೆ.
Comments