ಕಾಂಗ್ರೆಸ್ ನ ಮಾಜಿ ಶಾಸಕ ನರೇಂದ್ರಬಾಬು ಬಿಜೆಪಿಗೆ ಸೇರಲು ನಿರ್ಧರಿಸಿದ್ದಾರೆ
ಬೆಂಗಳೂರು : ಕಾಂಗ್ರೆಸ್ ನಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ ಎಂದು ಮಹಾಲಕ್ಷ್ಮೀ ಲೇಔಟ್ ನ ಮಾಜಿ ಶಾಸಕ ನೆ.ಲ.ನರೇಂದ್ರಬಾಬು ಅವರು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ.
ಮಹಾಲಕ್ಷ್ಮೀ ಲೇಔಟ್ ನ ಮಾಜಿ ಶಾಸಕ ನರೇಂದ್ರಬಾಬು ಅವರು ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಜತೆ ಮಾತುಕತೆ ನಡೆಸಿದ್ದು, ಇದೇ ಅಕ್ಟೋಬರ್ 1ರಂದು ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದೆ.
ನರೇಂದ್ರಬಾಬು ಅವರು 2004ರಲ್ಲಿ ಮೊದಲಿಗೆ ರಾಜಾಜಿನಗರ ಕ್ಷೇತ್ರದಿಂದ ಹಾಗೂ 2008ರಲ್ಲಿ ಮಹಾಲಕ್ಷ್ಕೀ ಲೇಔಟ್ ವಿಧಾಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2013ರಲ್ಲಿ ಜೆಡಿಎಸ್ ನ ಗೋಪಾಲಯ್ಯ ಅವರ ವಿರುದ್ಧ ಸೋಲು ಕಂಡಿದ್ದರು.
Comments