ಕಾವೇರಿ ನೀರು ಹಂಚಿಕೆ ವಿವಾದದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆ
ಕಾವೇರಿ ನೀರು ಹಂಚಿಕೆ ಪ್ರಕರಣವನ್ನು ಇಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ಮೂರು ಸದಸ್ಯ ಪೀಠ ವಿವಿಧ ರಾಜ್ಯಗಳ ಮೇಲ್ಮನವಿಗಳ ವಿಚಾರಣೆ ನಡೆಸಿ ಕೃಷ್ಣಾ, ನರ್ಮದಾ ನದಿಯ ಜಲ ಹಂಚಿಕೆಗೆ ನಿರ್ವಹಣಾ ಮಂಡಳಿ ರಚನೆಯಾಗಿರುವಂತೆ ಕಾವೇರಿ ನದಿ ನೀರು ಹಂಚಿಕೆಗೆ ನಿರ್ವಹಣಾ ಮಂಡಳಿ ರಚನೆ ಅಗತ್ಯ ಎಂದು ಅಭಿಪ್ರಾಯಪಟ್ಟಿದೆ.
ಕಾವೇರಿ ನದಿ ನೀರು ಹಂಚಿಕೆಗೆ ನಿರ್ವಹಣಾ ಮಂಡಳಿ ರಚನೆಯಾಗಬೇಕೆಂದು ಸುಪ್ರೀಂ ಕೋರ್ಟ್ ಇಂದು ಅಭಿಪ್ರಾಯಪಟ್ಟಿದ್ದು, ಇದರೊಂದಿಗೆ ಕಾವೇರಿ ನೀರು ಹಂಚಿಕೆ ವಿವಾದದಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಿದೆ. ಕಾವೇರಿ ನೀರು ಹಂಚಿಕೆಗೆ ನಿರ್ವಹಣಾ ಮಂಡಳಿ ಸ್ವರೂಪ ಯಾವ ರೀತಿ ಇರಬೇಕೆಂದು ತೀರ್ಪಿನಲ್ಲಿ ಹೇಳುತ್ತೇವೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ನಿರ್ವಹಣಾ ಮಂಡಳಿ ರಚನೆಯ ವಿರುದ್ಧ ಧ್ವನಿಯೆತ್ತಿದ್ದ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನ ಈ ಆದೇಶದಿಂದಾಗಿ ಹಿನ್ನಡೆ ಉಂಟಾಗಿದೆ.
Comments