ಬಿಬಿಎಂಪಿ ವಿಭಜನೆ : ರಚನೆಯಾಗುವುದೇ ಗ್ರೇಟರ್ ಬೆಂಗಳೂರು?

ಬೆಂಗಳೂರು : ಬಿಬಿಎಂಪಿ ಮೇಯರ್ ಆಯ್ಕೆಗೆ ಇದೇ 28ರಂದು ಚುನಾವಣೆ ನಿಗದಿಯಾಗಿದೆ. ಇದರ ಬೆನ್ನಲ್ಲೇ ಪಾಲಿಕೆಯನ್ನು ಮೂರು ಭಾಗ ಮಾಡುವ ಮಾತುಗಳು ಕೇಳಿ ಬರುತ್ತಿವೆ.
ಬಿಬಿಎಂಪಿಯನ್ನು ಮೂರು ಪಾಲಿಕೆಗಳನ್ನಾಗಿ ಪರಿವರ್ತಿಸಿ ಇಡೀ ಮೂರು ಪಾಲಿಕೆಗಳ ಉಸ್ತುವಾರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡುವುದು ಸರ್ಕಾರದ ಉದ್ದೇಶ ಎನ್ನಲಾಗಿದೆ.ಏನಪ್ಪಾ ಬಿಬಿಎಂಪಿ ಮೇಯರ್ ಆಯ್ಕೆ ಸಂದರ್ಭದಲ್ಲೇ ವಿಭಜನೆ ಮಾತು ಎಂದು ಗಾಬರಿಪಡುವ ಅಗತ್ಯವೇನಿಲ್ಲ.
ನಿಗದಿಯಂತೆ 28ರಂದು ಮೇಯರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆದರೆ 2018ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ನಂತರವಷ್ಟೆ ಬಿಬಿಎಂಪಿಯನ್ನು ವಿಭಜಿಸಲಾಗುವುದು ಎಂದು ತಿಳಿದುಬಂದಿದೆ. ಆಡಳಿತ ಸುಧಾರಣೆ ಮತ್ತು ಸಮನ್ವಯತೆ ಸಾಧಿಸುವ ದೃಷ್ಟಿಯಿಂದ ಬಿಬಿಎಂಪಿಯನ್ನು ಮೂರು ಭಾಗ ಮಾಡಲು ತೀರ್ಮಾನಿಸಲಾಗಿದೆ.
ಮೂರು ಹಂತಗಳಲ್ಲಿ ಪಾಲಿಕೆಯನ್ನು ವಿಭಜಿಸಲು ಮುಂದಾಗಿದ್ದು, ಮೊದಲನೆ ಹಂತದಲ್ಲಿ ವಾರ್ಡ್ ಸಮಿತಿಗಳನ್ನು ರಚನೆ ಮಾಡುವುದು, ಎರಡನೆ ಹಂತದಲ್ಲಿ ಬಿಬಿಎಂಪಿಯನ್ನು ಮೂರು ಭಾಗ ಮಾಡುವುದು ಹಾಗೂ ಮೂರನೆ ಹಂತವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡುವಂತೆ ಬಿಬಿಎಂಪಿ ಪುನರ್ ರಚನಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ.
Comments