ಸಿದ್ಧಗಂಗಾ ಶ್ರೀಗಳಿಗೆ ಅನಾರೋಗ್ಯ, ಬಿಜಿಎಸ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸಿದ್ಧಗಂಗಾ ಮಠದ ಶ್ರೀಗಳಾದ ಶತಾಯುಷಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಅನಾರೋಗ್ಯದ ಕಾರಣ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೂಲಗಳ ಪ್ರಕಾರ ಶ್ರೀಗಳಿಗೆ ಗಂಭೀರ ಸಮಸ್ಯೆ ಏನೂ ಆಗಿಲ್ಲ. ಆದರೆ ಕಫ, ಜ್ವರ ಹಾಗೂ ಗಂಟಲು ಕಟ್ಟುವಿಕೆ ಸಮಸ್ಯೆಯಿಂದಾಗಿ ಶ್ರೀಗಳು ಬಳಲುತ್ತಿದ್ದರು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಾಲಗಂಗಾಧರನಾಥ ಸ್ವಾಮಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇನ್ನು ಶ್ರೀಗಳನ್ನು ಪರೀಕ್ಷಿಸಿರುವ ವೈದ್ಯರು ಶ್ರೀಗಳಿಗೆ ಗಂಭೀರ ಸಮಸ್ಯೆ ಏನೂ ಆಗಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ಶ್ರೀಗಳನ್ನು ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆಯೂ ಶ್ರೀಗಳು ಶ್ವಾಸಕೋಶದ ಸೋಂಕಿನಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
Comments