Report Abuse
Are you sure you want to report this news ? Please tell us why ?
ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಪ್ರಕಟ

22 Sep 2017 10:59 AM | General
367
Report
ಬೆಂಗಳೂರು : ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳಿಗೆ ನಡೆದಿದ್ದ 2015 ನೇ ಸಾಲಿನ ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಅಂತಿಮ ಪರೀಕ್ಷೆಗೆ ಸುಮಾರು 8,500 ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗದ ವೆಬ್ ಸೈಟ್ ನಲ್ಲಿ ಆಯೋಗದ ಫಲಿತಾಂಶ ಲಭ್ಯವಿದೆ. ನವೆಂಬರ್ ಕೊನೆಯ ಅಥವಾ ಡಿಸೆಂಬರ್ ಮೊದಲ ವಾರ ಅಂತಿಮ ಪರೀಕ್ಷೆ ನಡೆಯುವ ಸಾಧ್ಯತೆ ಇದೆ.
ಕೆಎಎಸ್ ಪರೀಕ್ಷೆಗೆ ಒಟ್ಟು 2.31 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದರು. ಕಳೆದ ಆ. 20 ರಂದು ನಡೆದ ಪೂರ್ವಭಾವಿ ಪರೀಕ್ಷೆಗೆ 1.31 ಲಕ್ಷ ಅಭ್ಯರ್ಥಿಗಳು ಮಾತ್ರ ಹಾಜರಾಗಿದ್ದರು.

Edited By
venki swamy

Comments