ಇಂದು ಸಿದ್ದಗಂಗಾ ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್
ಅನಾರೋಗ್ಯದಿಂದ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯ ಡಾ.ರವೀಂದ್ರರವರು ತಿಳಿಸಿದ್ದಾರೆ . ಈ ಹಿನ್ನೆಲೆಯಲ್ಲಿ ಶ್ರೀಗಳು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಅನಾರೋಗ್ಯದ ಕಾರಣದಿಂದಾಗಿ ಇಲ್ಲಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿತ್ತು. ಜ್ವರ ಮತ್ತು ಜಾಂಡಿಸ್ ಕಾಯಿಲೆಯಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ರೀಗಳು ಗುಣಮುಖರಾಗಿದ್ದಾರೆ ಎಂದು ಬಿಜಿಎಸ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ಮಾಹಿತಿ ನೀಡಿದ್ದಾರೆ .ಆದರೆ ಇನ್ನೂ ನಾಲ್ಕೈದು ದಿನ ಶ್ರೀಗಳಿಗೆ ಮಠದಲ್ಲೇ ಸ್ಥಳೀಯ ವೈದ್ಯರು ಚಿಕಿತ್ಸೆ ಮುಂದುವರಿಸಲಿದ್ದಾರೆ.
Comments