ಕೇಂದ್ರದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್
ಕೇಂದ್ರ ನೌಕರರ ಮೂಲ ವೇತನವನ್ನು 2.57 ಪಟ್ಟು ಹೆಚ್ಚಳ ಮಾಡುವಂತೆ 7ನೇ ವೇತನ ಆಯೋಗ ಶಿಫಾರಸ್ಸು ಮಾಡಿತ್ತು. ಆದ್ರೆ ಕೇಂದ್ರ ಸರ್ಕಾರ 3.00 ಪಟ್ಟು ಏರಿಕೆ ಮಾಡುವ ಸಾಧ್ಯತೆ ಇದೆ. ಈ ಮೂಲಕ ಕನಿಷ್ಠ ವೇತನ 18,000 ರೂ.ನಿಂದ 21,000 ರೂ.ಗೆ ಏರಿಕೆ ಆಗಲಿದೆ.
ಕೇಂದ್ರ ಸರ್ಕಾರಿ ನೌಕರರ ವೇತನ ಹೆಚ್ಚಳ ಬೇಡಿಕೆ 2018ರ ಜನವರಿಯಲ್ಲಿ ಈಡೇರುವ ಸಾಧ್ಯತೆ ಇದೆ. 7ನೇ ವೇತನ ಆಯೋಗದ ಅಡಿಯಲ್ಲಿ 50 ಲಕ್ಷ ಕೇಂದ್ರ ಸರ್ಕಾರಿ ನೌಕರರ ಮೂಲ ವೇತನ ಹೆಚ್ಚಳ ಮಾಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಅಂತಿಮ ನಿರ್ಧಾರ ಜನವರಿಯಲ್ಲಿ ಹೊರಬೀಳುವ ನಿರೀಕ್ಷೆ ಇದೆ. ಆದ್ರೆ ನೌಕರರು ಕನಿಷ್ಠ ವೇತನವನ್ನು 25,000 ರೂಪಾಯಿಗೆ ನಿಗದಿ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಅಲ್ಪ ಪ್ರಮಾಣದ ಏರಿಕೆಗೆ ಶಿಫಾರಸ್ಸು ಮಾಡಿರುವ 7ನೇ ವೇತನ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Comments