ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ

ಬೆಂಗಳೂರು: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.
ಕುಮಾರಸ್ವಾಮಿ ಅವರ ಹೃದಯದ ಲ್ಯಾಪ್ರೋಸ್ಕೋಪಿಕ್ ಕೀ ಹೋಲ್ ಶಸ್ತ್ರಚಿಕಿತ್ಸೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ನಡೆದಿದ್ದು ಚಿಕಿತ್ಸೆ ಯಶಸ್ವಿಯಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.
ಹತ್ತು ವರ್ಷಗಳ ಹಿಂದೆ ಅಳವಡಿಸಿದ್ದ ಟಿಶ್ಯುವಾಲ್ವ್ ನ್ನು ಬದಲಿಸಿದ್ದು, 45 ನಿಮಿಷಗಳ ಕಾಲ ನಡೆದ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳಲು 3 ಗಂಟೆಗಳು ಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
ಲಂಡನ್ನಿಂದ ಬಂದಿದ ಮೂವರು ವೈದ್ಯರು ಮತ್ತು ಭಾರತದ ಐವರು ಹೃದ್ರೋಗ ತಜ್ಞರು ಜತೆಗೂಡಿ ಈ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಇದರ ನಂತರ ಮುಂದಿನ 15 ವರ್ಷಗಳ ಕಾಲ ಯಾವುದೇ ತೊಂದರೆಯಾಗದು ಎಂದು ಹೇಳಲಾಗಿದೆ.
ಶಸ್ತ್ರ ಚಿಕಿತ್ಸೆ ಕಾರಣ ಒಂದು ತಿಂಗಳ ಕಾಲ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ.ಕುಮಾರಸ್ವಾಮಿ ವಿಶ್ರಾಂತಿಗಾಗಿ ಸಿಂಗಾಪುರಕ್ಕೆ ತೆರಳಲಿದ್ದಾರೆ. ಸಿಂಗಪುರದಿಂದ ಮರಳಿದ ನಂತರ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ
Comments