28ರ ವರೆಗೆ ಮುಂದುವರೆಯಲಿದೆ ಮಳೆ

ನಿನ್ನೆಯಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ ಸ್ವಾಭಾವಿಕ ಮಳೆಯಾಗಿದ್ದು, ದಕ್ಷಿಣ ಒಳನಾಡಿನಲ್ಲಿ 28ರ ವರೆಗೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಳೆದ ರಾತ್ರಿ ಭಾರೀ ಪ್ರಮಾಣದ ಮಳೆಯಾಗಿದೆ. ಈ ಮಳೆ 28ರ ವರೆಗೆ ಮುಂದುವರಿಯುವ ಸಾಧ್ಯತೆ ಇದೆ.
ವಾಯುಭಾರ ಕುಸಿತದಿಂದಾಗಲಿ, ಮೋಡ ಬಿತ್ತನೆಯಿಂದಾಗಲಿ ಸುರಿದಿರುವ ಮಳೆಯಲ್ಲ. ಸ್ವಾಭಾವಿಕ ಮಳೆಯಾಗಿದೆ ಎಂದು ಹವಾಮಾನ ತಜ್ಞ ಎ.ಎಸ್.ಪ್ರಕಾಶ್ ತಿಳಿಸಿದ್ದಾರೆ. ಉತ್ತರ ಒಳನಾಡಿನಲ್ಲಿ ಚದುರಿದಂತೆ ಮಳೆಯಾಗಿದ್ದು, ಈ ತಿಂಗಳ 28ರ ನಂತರ ಆ ಭಾಗದಲ್ಲಿ ಭಾರೀ ಪ್ರಮಾಣದ ಮಳೆ ಬೀಳುವ ಸಾಧ್ಯತೆ ಇದೆ. ಕಳೆದ ಐದಾರು ದಿನಗಳಿಂದ ಬಿಡುವು ಕೊಟ್ಟಿದ್ದು, ಭಾರೀ ಪ್ರಮಾಣದ ಬಿಸಿಲಿನ ಧಗೆಯಿಂದ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾದ ಪರಿಣಾಮ ಮಳೆಯಾಗಿದೆ.
Comments