ವರುಣನ ಆರ್ಭಟಕ್ಕೆ ತತ್ತರಿಸಿದ ಮೈಸೂರು
ರಾತ್ರಿಯಿಡಿ ಮೈಸೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಬೋಗಾದಿಕೆರೆ ತುಂಬಿ ಹರಿಯುತ್ತಿದೆ. ದಸರಾ ಸಂಭ್ರಮಕ್ಕೆ ವರುಣ ಅವಕೃಪೆ ತೋರಿದ್ದಾನೆ . ರಸ್ತೆ, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಉದಯಗಿರಿ, ಬನ್ನಿ ಮಂಟಪ ಬಡಾವಣೆಗಳಿಗೂ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದೆ.
ಇನ್ನು ಕನಕಗಿರಿ ಬಡಾವಣೆಯಲ್ಲಿ ಮನೆಯೊಳಗೆ ನೀರು ನುಗ್ಗಿದ್ದು, 2 ತಿಂಗಳ ಹಸುಗೂಸು ಮತ್ತು ಬಾಣಂತಿಯನ್ನು ಸ್ಥಳೀಯರು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ತಲುಪಿಸಿದ್ದಾರೆ. ಅನೇಕ ರಸ್ತೆಗಳ ಮೇಲೆ ನೀರು ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಮೈಸೂರು ಮಾತ್ರವಲ್ಲದೇ, ಜಿಲ್ಲೆಯ ಅನೇಕ ತಾಲ್ಲೂಕುಗಳಲ್ಲಿ ಮಳೆಯಾಗಿ, ಹಳ್ಳಕೊಳ್ಳಗಳು ತುಂಬಿ ಹರಿದಿವೆ.
Comments