ಪ್ರತಿಷ್ಠಿತ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಕೆ.ತಿಪ್ಪೇಸ್ವಾಮಿ ಅಧಿಕೃತ ನಾಮಸೂಚನೆ

04 Oct 2017 5:46 PM | General
365 Report

ತಿಪ್ಪೇಸ್ವಾಮಿ ಅವರು ಚಳ್ಳಕೆರೆ ಪುರಸಭೆ ಸದಸ್ಯರಾಗಿ, ಅಧ್ಯಕ್ಷರಾಗಿ, ಶಾಸಕರಾಗಿ, ಸಚಿವರೂ ಆಗಿ ಸೇವೆ ಸಲ್ಲಿಸಿದವರು. ಸ್ವಂತ ಪರಿಶ್ರಮದಿಂದ ಬೆಳೆದು ಬಂದ ನಾಯಕ ಆದ್ದರಿಂದ, ಅವರಿಗೆ ವಿಧಾನಸೌಧದ ಮುಂಭಾಗ ನಡೆಯಲಿರುವ ಅದ್ಧೂರಿ ವಾಲ್ಮೀಕಿ ಜಯಂತಿ ಸಂದರ್ಭ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಆಂಜನೇಯ ತಿಳಿಸಿದರು.

1944, ಮೇ 24ರಂದು ಚಳ್ಳಕೆರೆ ತಾಲ್ಲೂಕಿನ ಭರಮಸಾಗರ ಗ್ರಾಮದಲ್ಲಿ ಜನಿಸಿದ ತಿಪ್ಪೇಸ್ವಾಮಿ ಅವರು ಚಳ್ಳಕೆರೆ ಪುರಸಭೆ ಸದಸ್ಯರಾಗಿ, ಅಧ್ಯಕ್ಷರಾಗಿ, ಶಾಸಕರಾಗಿ, ಸಚಿವರೂ ಆಗಿ ಸೇವೆ ಸಲ್ಲಿಸಿದವರು. ಮಹರ್ಷಿ ವಾಲ್ಮೀಕಿ ಪ್ರಶಸ್ತಿಯು 5 ಲಕ್ಷ ನಗದು ಮತ್ತು ಫಲಕಗಳನ್ನು ಒಳಗೊಂಡಿರುತ್ತದೆ ಎಂದು ಆಂಜನೇಯ ತಿಳಿಸಿದರು. ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿಯಾಗಿದ್ದಾಗ ತಿಪ್ಪೇಸ್ವಾಮಿ ಅಬಕಾರಿ ಸಚಿವರಾಗಿದ್ದರು. 1989ರಲ್ಲಿ ನಡೆದ ಚುನಾವಣೆಯಲ್ಲಿ ಸೋಲು ಅನುಭವಿಸಿದರು. ಆದರೆ 1995ರಲ್ಲಿ ಮರು ಆಯ್ಕೆಯಾಗಿದ್ದರು. ನಂತರ 2008ರಲ್ಲಿ ಮತ್ತೆ ಶಾಸಕರಾಗಿ ವಾಲ್ಮೀಕಿ ಗುರುಪೀಠ ಸ್ಥಾಪನೆ, ಹಿಂದುಳಿದ ವರ್ಗಗಳು, ವಾಲ್ಮೀಕಿ, ನಾಯಕ, ಬೇಡ ಸಮುದಾಯಗಳನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಹೋರಾಡಿದರು.

ಬಳಿಕ ಪರಿಶಿಷ್ಟ ವರ್ಗದ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪನೆಗೆ ಕಾರಣೀಭೂತರಾದರು. ಚಳ್ಳಕೆರೆಗೆ ವಿವಿಸಾಗರದಿಂದ ಕುಡಿಯುವ ನೀರು ಪೂರೈಕೆ,ಭದ್ರ ಮೇಲ್ದಂಡೆ ಯೋಜನೆಗಳಿಗೆ ಹೋರಾಟ ನಡೆಸಿದರು. ಹಲವಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ 73ರ ಹರೆಯದಲ್ಲೂ ಸಮಾಜ ಸೇವೆ ಮುಂದುವರೆಸುತ್ತಿದ್ದಾರೆ.

Edited By

Shruthi G

Reported By

Madhu shree

Comments