ಹವಾಮಾನ ಇಲಾಖೆ: ಬೆಂಗಳೂರಿನಲ್ಲಿ ಇನ್ನು ಐದು ದಿನಗಳ ಕಾಲ ಭರ್ಜರಿ ಮಳೆ
ಅರಬ್ಬಿ ಸಮುದ್ರದ ಪೂರ್ವ ಕೇಂದ್ರದ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ರಾಜ್ಯದ ಕರಾವಳಿ ಭಾಗ ಹಾಗೂ ಕೇರಳದ ಉತ್ತರ ಭಾಗದಲ್ಲಿ ಇನ್ನು ಐದು ದಿನಗಳ ಕಾಲ ಮಳೆ ಹೀಗೆ ಮುಂದುವರೆಯಲಿದೆ ಎಂದು ಹವಾಮಾನ ನಿರ್ದೇಶಕ ಸುಂದರ ಮೇತ್ರಿ ಹೇಳಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನಾನಾ ಕಡೆ ಎಡಬಿಡದೇ ಮಳೆ ಸುರಿಯುತ್ತಿದ್ದು ಇನ್ನು ಐದು ದಿನಗಳ ಕಾಲ ವರುಣನ ಆರ್ಭಟ ಮುಂದುವರೆಯಲಿದೆ. ಸದ್ಯ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ. ಮಳೆಯ ರಭಸಕ್ಕೆ ನೈಸ್ ರಸ್ತೆಯಲ್ಲಿ ವಾಹನ ಚಲಾಯಿಸಲು ಆಗದೆ ಸವಾರರು ರಸ್ತೆಯಲ್ಲೇ ವಾಹನಗಳನ್ನು ನಿಲ್ಲಿಸಿರುವುದರಿಂದ ಟ್ರಾಫಿಕ್ ಜಾಮ್ ಶುರುವಾಗಿದೆ.
Comments