ಸಿಎಂ ಸಿದ್ದರಾಮಯ್ಯ ಹಿರಿಯ ಸಹೋದರಿ ಇನ್ನಿಲ್ಲ...
ಚಿಕಿತ್ಸೆ ಫಲಕಾರಿಯಾಗದೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಹಿರಿಯ ಸಹೋದರಿ ಚಿಕ್ಕಮ್ಮ ನಿಧನರಾಗಿದ್ದು, ದೇವೇಗೌಡನಹುಂಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಹಿರಿಯ ಸಹೋದರಿ ಚಿಕ್ಕಮ್ಮ(91) ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಚಿಕ್ಕಮ್ಮ ನಿಧನರಾಗಿದ್ದು, ದೇವೇಗೌಡನಹುಂಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಯವರ ಇಂದಿನ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.
Comments