ದೇಶದೆಲ್ಲೆಡೆ ಮುಂದುವರೆಯುತ್ತಿರುವ ಲಾರಿ ಮುಷ್ಕರ
ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.) ವ್ಯಾಪ್ತಿಗೆ ಡೀಸೆಲ್ ತರಬೇಕು. ಪೊಲೀಸ್, ಸಾರಿಗೆ ಇಲಾಖೆ ಹಾಗೂ ಟೋಲ್ ಗಳಲ್ಲಿ ಕಿರುಕುಳ ತಪ್ಪಿಸಬೇಕು. ಡೀಸೆಲ್ ಬೆಲೆ ಇಳಿಕೆ ಮಾಡಬೇಕೆಂದು ಆಗ್ರಹಿಸಿ, ಅಖಿಲ ಭಾರತ ಟ್ರಕ್ ನಿರ್ವಾಹಕರ ಸಂಘಟನೆ ಮುಷ್ಕರಕ್ಕೆ ಕರೆ ನೀಡಿದೆ.
ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಟ್ರಕ್ ನಿರ್ವಾಹಕರ ಸಂಘಟನೆ ಕರೆ ನೀಡಿರುವ ಮುಷ್ಕರಕ್ಕೆ ಹೆಚ್ಚಿನ ಬೆಂಬಲ ವ್ಯಕ್ತವಾಗಿದೆ.90 ಲಕ್ಷಕ್ಕೂ ಅಧಿಕ ಟ್ರಕ್ ಗಳು ಮುಷ್ಕರ ಕೈಗೊಂಡಿದ್ದು, ಸರಕು ಪೂರೈಕೆಯಲ್ಲಿ ವ್ಯತ್ಯಯವಾಗಿ ಸುಮಾರು 2000 ಕೋಟಿ ರೂ. ನಷ್ಟವಾಗಿದೆ.ದೈನಂದಿನ ಡೀಸೆಲ್ ಬೆಲೆ ಪರಿಷ್ಕರಣೆಯಿಂದ ಉದ್ಯಮದ ಮೇಲೆ ಪರಿಣಾಮ ಬೀರಿದೆ. ಪ್ರತಿ 3 ತಿಂಗಳಿಗೊಮ್ಮೆ ಬೆಲೆ ಪರಿಷ್ಕರಿಸಬೇಕು ಎಂದು ಸಂಘಟನೆಯ ಪ್ರಮುಖರು ಒತ್ತಾಯಿಸಿದ್ದಾರೆ.ಸರಕು ಮತ್ತು ಸೇವಾ ತೆರಿಗೆಯನ್ನು ಜಾರಿಗೆ ತರಲಾಗಿದ್ದರೂ, ಸರಕು ಸಾಗಣೆದಾರರಿಗೆ ತೆರಿಗೆ ಬಗ್ಗೆ ಸ್ಪಷ್ಟನೆ ನೀಡಿಲ್ಲ ಎಂದು ದೂರಿದ್ದಾರೆ. ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು. ಇಲ್ಲದಿದ್ದರೆ, ದೀಪಾವಳಿ ಬಳಿಕ ಅನಿರ್ದಿಷ್ಟ ಮುಷ್ಕರ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
Comments