ರಾಜ್ಯದೆಲ್ಲೆಡೆ ಭಾರಿ ಮಳೆ, ಜನ ಜೀವನ ಅಸ್ತವ್ಯಸ್ತ

ನೆಲ ಮಂಗಲದಲ್ಲಿ ಅಮಾನಿ ಕೆರೆಯ ಕೊಡಿ ಒಡೆದಿದ್ದು,ಸುಮಾರು 400 ಮನೆಗಳಿಗೆ ನೀರು ನುಗ್ಗಿದೆ. ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವೆಡೆ ಮನೆಗಳ ಗೋಡೆಗಳು ಕುಸಿದು ಬೀಳುತ್ತಿವೆ. ರಾಮನಗರ ಜಿಲ್ಲೆಯಾದ್ಯಂತ ಕುಂಭದ್ರೋಣ ಮಳೆ ಸುರಿದಿದ್ದು, ಕನಕಪುರ -ಬೆಂಗಳೂರು ರಸ್ತೆಯ ಸಂಪರ್ಕ ಕಡಿತಗೊಂಡಿದೆ.
ನೆಲಮಂಗಲ, ರಾಮನಗರ ಸೇರಿದಂತೆ ರಾಜ್ಯದ ವಿವಿಧೆಡೆ ಮಂಗಳವಾರ ತಡರಾತ್ರಿಯಿಂದ ಬುಧವಾರ ಬೆಳಗ್ಗಿನವರೆಗೆ ಭಾರಿ ಮಳೆ ಸುರಿದಿದ್ದು ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಮನೆಗಳು ಕುಸಿದು ಬಿದ್ದಿದ್ದು, ವಿಜಯಪುರದ ಬಸವನಬಾಗೇವಾಡಿಯಲ್ಲಿ ಮನೆ ಕುಸಿದು ತಾಯಿ, ಮಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆಯಾದ್ಯಂತ ಕುಂಭದ್ರೋಣ ಮಳೆ ಸುರಿದಿದ್ದು, ಕನಕಪುರ -ಬೆಂಗಳೂರು ರಸ್ತೆಯ ಸಂಪರ್ಕ ಕಡಿತಗೊಂಡಿದೆ. ಬಸ್ ಗಳು ಮತ್ತು ವಾಹನಗಳ ಸಂಚಾರ ಸಾಧ್ಯವಾಗದೆ ಪ್ರಯಾಣಿಕರು ಪರದಾಡಬೇಕಾಗಿದೆ.
ಬಸ್ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿರುವ ಬಗ್ಗೆ ವರದಿಯಾಗಿದೆ. ವಿಜಯಪುರದಲ್ಲೂ ಭಾರೀ ಮಳೆ ಸುರಿದ್ದಿದ್ದು ಬಸವನಬಾಗೇವಾಡಿಯಲ್ಲಿ ಮನೆ ಕುಸಿದು ತಾಯಿ,ಮಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. 60 ವರ್ಷದ ಶಂಕ್ರಮ್ಮ ರಾಮಚಂದ್ರಪ್ಪ ಮತ್ತು ಮಗಳು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಕೆಲ ತಗ್ಗು ಪ್ರದೇಶದಲ್ಲಿ ಸೇತುವೆಗಳು ಮುಳುಗಡೆಯಾಗಿದ್ದು ಸಂಚಾರ ಸಾಧ್ಯವಾಗುತ್ತಿಲ್ಲ. ಬೀದರ್ ನಲ್ಲೂ ತಡರಾತ್ರಿ ಭಾರೀ ಮಳೆ ಸುರಿದಿದ್ದು,ಜನಜೀವನದ ಮೇಲೆ ದುಷ್ಪರಿಣಾಮ ಬೀರಿದೆ.
ಚಾಮರಾಜನಗರದಲ್ಲಿ ಯುವಕನ ರಕ್ಷಣೆ
ಚಾಮರಾಜನಗರದಲ್ಲೂ ವರುಣ ಅಬ್ಬರಿಸಿದ್ದು, ಕೊಳ್ಳೇಗಾಲದ ಲೊಕ್ಕನಹಳ್ಳಿಯ ಉಡುತೊರೆ ಹಳ್ಳದಲ್ಲಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನನ್ನು ಸ್ಥಳೀಯ ಯುವಕರು ತಮ್ಮ ಪ್ರಾಣದ ಹಂಗು ತೊರೆದು ರಕ್ಷಣೆ ಮಾಡಿದ್ದಾರೆ.
Comments