ಅನಾರೋಗ್ಯದ ಹಿನ್ನಲೆ ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು
ಉಸಿರಾಟದ ತೊಂದರೆಯಿಂದಾಗಿ ಕಳೆದ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ತಿಮ್ಮಕ್ಕ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶನಿವಾರ ರಾತ್ರಿ ಆರೋಗ್ಯಕ್ಕೆ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಸಾಮಾನ್ಯ ವಾರ್ಡ್ ಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ
ಪರಿಸರವಾದಿ ಸಾಲುಮರದ ತಿಮ್ಮಕ್ಕ ಉಸಿರಾಟದ ಸಮಸ್ಯೆಯಿಂದಾಗಿ ಜಯನಗರದ ಅಪೋಲೋ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಸಿರಾಟದ ತೊಂದರೆಯಿಂದಾಗಿ ಕಳೆದ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ತಿಮ್ಮಕ್ಕ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶನಿವಾರ ರಾತ್ರಿ ಆರೋಗ್ಯಕ್ಕೆ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಸಾಮಾನ್ಯ ವಾರ್ಡ್ ಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಆಸ್ಪತ್ರೆಯ ವೈದ್ಯರಾದ ಡಾ. ರವೀಂದ್ರ ಮೆಹ್ತಾ ಮತ್ತು ಡಾ. ರಜನಿ ಭಟ್ ಅವರು ತಿಮ್ಮಕ್ಕ ಅವರ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ಗುಣಹೊಂದುತ್ತಿದ್ದಂತೆಯೇ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
Comments