ನಾಳೆ ಬಿಡದಿಯಲ್ಲಿ ಜೆಡಿಎಸ್ ರಾಜ್ಯ ಯುವ ಕಾರ್ಯಕಾರಣಿ ಸಭೆ  

20 Oct 2017 11:07 PM | General
506 Report

ರಾಮನಗರ : 2018ರ ವಿದಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತಾಲೀಮು ಆರಂಭಿಸಿವೆ. ಅಂತೆಯೇ ಯುವಕರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯ ಕಾರ್ಯಕಾರಣಿ ಸಭೆ ನಾಳೆ (ಅ.21) ಬಿಡದಿ ಬಳಿಯ ಮ್ಯಾಗ್ನೋಲಿಯ ರೆಸಾರ್ಟ್ ನಲ್ಲಿ ಹಮ್ಮಿಕೊಳ್ಳಲಾಗಿದೆ.

ಯುವ ಘಟಕದ ರಾಜ್ಯಾಧ್ಯಕ್ಷ ಹಾಗೂ ಶಾಸಕ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ದಿನವಿಡಿ ಸಭೆಯಲ್ಲಿ ಉಪಸ್ಥಿತರಿದ್ದು ಮಾರ್ಗದರ್ಶನ ನೀಡಲಿದ್ದಾರೆ.ರಾಜ್ಯದ 125 ತಾಲ್ಲೂಕುಗಳು, 30 ಜಿಲ್ಲೆಗಳ ಯುವ ಘಟಕದ ಅಧ್ಯಕ್ಷರುಗಳು ಸೇರಿದಂತೆ ಶಾಸಕರು, ವಿಧಾನ ಪರಿಷತ್ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಯುವ ಘಟಕದ ಜಿಲ್ಲಾಧ್ಯಕ್ಷ ನರಸಿಂಹಮೂರ್ತಿ ತಿಳಿಸಿದರು.

ಕಾರ್ಯಕಾರಣಿ ಸಭೆಯಲ್ಲಿ ಪ್ರಮುಖವಾಗಿ ಬೂತ್ ಮಟ್ಟದಿಂದ ಪಕ್ಷವನ್ನು ಸದೃಢಗೂಳಿಸುವುದು. ರಾಜ್ಯದ ಮನೆ-ಮನೆಗಳಿಗೆ ಕಾರ್ಯಕರ್ತರು ತೆರಳಿ ಕುಮಾರಸ್ವಾಮಿ ಅವರ 20 ತಿಂಗಳ ಆಡಳಿತದಲ್ಲಿ ಜಾರಿಗೆ ತಂದ ಜನಪರ ಯೋಜನೆಗಳು ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವುದು ಮತ್ತು ಮುಂದೆ ಅಧಿಕಾರಕ್ಕೆ ಬಂದರೆ ಅನುಷ್ಠಾನಗೊಳಿಸಲು ಉದ್ದೇಶಿರುವ ಕಾರ್ಯಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿ ಚುನಾವಣೆಯಲ್ಲಿ ಜೆಡಿಎಸ್ ಪರ ಮತ ಚಲಾಯಿಸಿವಂತೆ ಶ್ರಮಿಸುವ ನಿಟ್ಟಿನಲ್ಲಿ ಯುವ ಕಾರ್ಯಕರ್ತನ್ನು ಶಿಬಿರದಲ್ಲಿ ಸಜ್ಜುಗೂಳಿಸಲು ಉದ್ದೇಶಿಸಿದೆ ಎಂದು ಹೇಳಿದರು.ರಾಜ್ಯದಲ್ಲಿ ರೈತರ ಹಿತ ಕಾಯಲು ಜೆಡಿಎಸ್ ಪಕ್ಷದಿಂದ ಮಾತ್ರ ಸಾಧ್ಯ ಎಂಬುದು ಈಗಾಗಲೆ ಜನರಿಗೆ ಮನವರಿಕೆಯಾಗಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ವಿಶ್ವಾಸ ವ್ಯಕ್ತಪಡಿಸಿದರು.

Edited By

Shruthi G

Reported By

Shruthi G

Comments