ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಟಿ.ಮಲ್ಲೇಶ್ ನೇಮಕ

ಬೆಂಗಳೂರು : ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಘಟಕದ ರಾಜ್ಯಪ್ರಧಾನಕಾರ್ಯದರ್ಶಿಯನ್ನಾಗಿ ಪಾಲಿಕೆ ಮಾಜಿ ಸದಸ್ಯ ಟಿ.ಮಲ್ಲೇಶ್ ಅವರನ್ನು ನೇಮಕ ಮಾಡಲಾಗಿದೆ. ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡ ಅವರು ಟಿ.ಮಲ್ಲೇಶ್ ಅವರನ್ನು ಪ್ರಧಾನಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ದಿನೇಶ್‍ಗುಂಡೂರಾವ್ ಅವರ ವಿರುದ್ಧ ಪ್ರಬಲ ಅಭ್ಯರ್ಥಿಯಾಗಿ ಟಿ.ಮಲ್ಲೇಶ್ ಅವರು ಪೈಪೋಟಿ ನೀಡಲಿದ್ದಾರೆ. ಇದರಿಂದ ಜೆಡಿಎಸ್‍ಗೆ ಆನೆ ಬಲಬಂದಂತಾಗಿದ್ದು, ಟಿ.ಮಲ್ಲೇಶ್ ಅವರು ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಗೆ ಒತ್ತು ನೀಡಲಿದ್ದಾರೆ.
Comments