ಪ್ರಧಾನಿ ನರೇಂದ್ರ ಮೋದಿ ಅ. 29 ರಂದು ಧರ್ಮಸ್ಥಳಕ್ಕೆ ಭೇಟಿ

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಅ. 29 ರಂದು ಭೇಟಿ ನೀಡುವ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಹಿರಿಯ ಅಧಿಕಾರಿಗಳ ಸಿದ್ಧಾತಾ ಸಭೆ ಧರ್ಮಸ್ಥಳದಲ್ಲಿ ನಿನ್ನೆ ನಡೆಯಿತು.
ಪ್ರಧಾನಿ ಅವರು ಅ. 29 ರಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ 10.30 ಕ್ಕೆ ಧರ್ಮಸ್ಥಳಕ್ಕೆ ತೆರಳಲಿದ್ದಾರೆ. ನಂತರ ಧರ್ಮಸ್ಥಳ ಶ್ರೀ ಮಂಜುನಾಥ ದೇವಸ್ಥಾನ ಸಂದರ್ಶಿಸಲಿದ್ದಾರೆ. ಅಲ್ಲಿಂದ ಉಜಿರೆಗೆ ಆಗಮಿಸಿ ಸ್ವಸಹಾಯ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಂಸದ ನಳೀನ್ ಕುಮಾರ್ ಅವರು ತಿಳಿಸಿದರು.ಅ. 27 ರಂದು ಎಸ್ಪಿ ಜಿಯ ಡಿಜಿಪಿ ಸೇರಿದಂತೆ ಅಧಿಕಾರಿಗಳು ಆಗಮಿಸಿ, ಪ್ರಧಾನಿ ಭೇಟಿ ಸ್ಥಳವನ್ನು ತಮ್ಮ ಸುಪರ್ದಿಗೆ ತೆಗೆದುಕೊಳ್ಳಲಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳು, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
Comments