ಅ.28, 29 ರಂದು ಸಾರ್ವಜನಿಕರಿಗೆ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನವಿಲ್ಲ

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಅ. 29 ರಂದು ಭೇಟಿ ನೀಡುವ ಹಿನ್ನೆಲೆಯಲ್ಲಿ ಅ. 28 ಮತ್ತು 29 ರಂದು ಸಾರ್ವಜನಿಕರಿಗೆ ಮಂಜುನಾಥ ಸ್ವಾಮಿ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಶ್ರೀಕ್ಷೇತ್ರ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಧಾನಿ ಮೋದಿ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾನುನೂ ಸುವ್ಯವಸ್ಥೆ ಎಡಿಜಿಪಿ ಅಲೋಕ್ ಮೋಹನ್, ನಕ್ಸಲ್ ನಿಗ್ರಹ ಪಡೆಯ ಕಾಮೊಂಡೋಗಳು ಆಗಮಿಸಿದ್ದಾರೆ. ಹೆಚ್ಚಿನ ಭದ್ರತೆಗೆ 3 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಇದರಲ್ಲಿ ಡಿವೈಎಸ್ಪಿ, ಇನ್ಸ್ ಪೆಕ್ಟರ್ ,ಪಿಎಸ್ ಐ ಸೇರಿ 300 ಹಿರಿಯ ಅಧಿಕಾರಿಗಳು ಇರಿದ್ದಾರೆ ಎಂದು ದಕ್ಷಿಣ ಕನ್ನಡ ಎಸ್ಪಿ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
Comments