ಅನಿತಾ ,ಪ್ರಜ್ವಲ್‌ ಸ್ಪರ್ಧೆಗೆ ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ : ದೇವೇಗೌಡ

26 Oct 2017 11:18 AM | General
430 Report

ಹಾಸನ: ‘ಅನಿತಾ ಕುಮಾರಸ್ವಾಮಿ ಹಾಗೂ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವ ಬಗ್ಗೆ ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ. ಎಲ್ಲರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಇಲ್ಲಿ ಬುಧವಾರ ಸ್ಪಷ್ಟಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಆಯೋಗ, ಆರ್‌ಬಿಐ, ಸಿಬಿಐಗೆ ಗುಜರಾತಿಗಳನ್ನು ನೇಮಿಸಿ ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದಾರೆ. ಗುಜರಾತ್‌ನಲ್ಲಿ ಹಾರ್ದಿಕ್‌ ಪಟೇಲ್‌ ಒಡನಾಡಿಗಳನ್ನು ಬಿಜೆಪಿಗೆ ಸೇರಿಸಿಕೊಳ್ಳಲಾಗಿದೆ. ಅಪರೇಷನ್‌ ಕಮಲದ ರೂವಾರಿ ಬಿ.ಎಸ್‌.ಯಡಿಯೂರಪ್ಪ. ಹಾಗಾಗಿ ಯಡಿಯೂರಪ್ಪ ಅವರೇ ಅಮಿತ್‌ ಷಾ ಅವರಿಗೆ ಮಾರ್ಗದರ್ಶನ ನೀಡಿರಬೇಕು’ ಎಂದು ವ್ಯಂಗ್ಯವಾಡಿದರು.ನ. 1ರಿಂದ ಕುಮಾರಸ್ವಾಮಿ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ. ಹಿರಿಯ ಮುಖಂಡ ಪಿ.ಜಿ.ಆರ್‌.ಸಿಂಧ್ಯ ಸೇರಿದಂತೆ ಹಲವು ನಾಯಕರು ಪಕ್ಷಕ್ಕೆ ಬರುತ್ತಿದ್ದಾರೆ’ ಎಂದರು.

Edited By

Shruthi G

Reported By

Shruthi G

Comments