ಎಸ್‌ಎಸ್‌ಎಲ್ಸಿ ಪರೀಕ್ಷಾ ವೇಳಾ ಪಟ್ಟಿ ಸಿದ್ದ

ವಿಧಾನಸಭೆ ಚುನಾವಣೆಗೂ ಮುನ್ನ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಸಲಾಗುವುದು ಎಂದು ಪರೀಕ್ಷಾ ಮಂಡಳಿಯ ನಿರ್ದೇಶಕಿ ಸುಮಂಗಲಿ ತಿಳಿಸಿದ್ದಾರೆ. ಮಾರ್ಚ್ 23 ರಿಂದ ಏಪ್ರಿಲ್ 5 ರ ವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ವಿಧಾನಸಭೆ ಚುನಾವಣೆಗೂ ಮುನ್ನ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಸಲಾಗುವುದು ಎಂದು ಪರೀಕ್ಷಾ ಮಂಡಳಿಯ ನಿರ್ದೇಶಕಿ ಸುಮಂಗಲಿ ತಿಳಿಸಿದ್ದಾರೆ. ಮಾರ್ಚ್ 23 ರಿಂದ ಏಪ್ರಿಲ್ 5 ರ ವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪರೀಕ್ಷೆಗಳು ಅಸ್ತವ್ಯಸ್ತವಾಗುವ ಹಿನ್ನೆಲೆಯಲ್ಲಿ ಚುನಾವಣೆಗೆ ಮುನ್ನವೇ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪರೀಕ್ಷಾ ಮಂಡಳಿಯ ಮೂಲಗಳು ತಿಳಿಸಿವೆ. ಎಸ್‌ಎಸ್‌ಎಲ್ಸಿ ಪರೀಕ್ಷೆ ವೇಳಾ ಪಟ್ಟಿ ಪ್ರಕಟವಾಗಿದ್ದು, ಮಾರ್ಚ್ 23 ರಂದು ಕನ್ನಡ, 26 ರಂದು ಗಣಿತ, 28 ಇಂಗ್ಲೀಷ್, 31ರಂದು ವಿಜ್ಞಾನ, ಏಪ್ರಿಲ್ 2 ರಂದು ಹಿಂದಿ, ಏಪ್ರಿಲ್ 4 ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.
Comments