ಬಿ.ಜೆ.ಪಿ.ಗೆ ತಿರುಗೇಟು ನೀಡಲು ಕಾಂಗ್ರೆಸ್ ಸಜ್ಜು..!

ಬೆಂಗಳೂರು: ಇಂಧನ ಇಲಾಖೆಯಲ್ಲಿ ಮುಖ್ಯಮಂತ್ರಿ ಮತ್ತು ಸಚಿವರು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮಾಡಿದ್ದ ಆರೋಪಕ್ಕೆ ತಿರುಗೇಟು ನೀಡಲು ಕಾಂಗ್ರೆಸ್ ಸಜ್ಜಾಗಿದೆ.ಬಿ.ಜೆ.ಪಿ. ಆಡಳಿತದಲ್ಲಿ ವಿದ್ಯುತ್ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ಸಚಿವರಾಗಿದ್ದ ಶೋಭಾ ಕರಂದ್ಲಾಜೆ 40 ಕೋಟಿ ರೂ. ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಪ್ರಸ್ತಾಪಿಸಿ ಸೇಡು ತೀರಿಸಿಕೊಳ್ಳಲು ಮುಂದಾಗಿದೆ.
ಬಿ.ಜೆ.ಪಿ. ಅಧಿಕಾರದ ಅವಧಿಯಲ್ಲಿ ದುಬಾರಿ ಬೆಲೆಗೆ ವಿದ್ಯುತ್ ಖರೀದಿ ಮಾಡಲಾಗಿದೆ. ಪ್ರತಿ ಯೂನಿಟ್ ಗೆ 3.05 ರೂ. ಖರೀದಿಗೆ ಪ್ರಸ್ತಾವನೆ ಸಲ್ಲಿಸಿ, ಬಳಿಕ 6.30 ರೂ.ಗೆ ಖರೀದಿ ಮಾಡಲಾಗಿದೆ. ಆನ್ ಲೈನ್ ನಲ್ಲಿ ಒಂದೇ ದಿನ ಬೇರೆ, ಬೇರೆ ದರ ನೀಡಿ ವಿದ್ಯುತ್ ಖರೀದಿ ಮಾಡಲಾಗಿದೆ ಎನ್ನಲಾಗಿದ್ದು, ಇವೇ ಮೊದಲಾದ ಅಂಶಗಳನ್ನು ಮುಂದಿಟ್ಟುಕೊಂಡು ಬಿ.ಜೆ.ಪಿ.ಗೆ ತಿರುಗೇಟು ನೀಡಲು ಕಾಂಗ್ರೆಸ್ ಮುಂದಾಗಿದೆ ಎಂದು ಹೇಳಲಾಗಿದೆ.
Comments