ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆ

28 Oct 2017 12:43 PM | General
541 Report

ಬೆಂಗಳೂರು : ಒಳನಾಡು ಕರ್ನಾಟಕ ಮತ್ತು ಕರಾವಳಿ ತೀರದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾದ್ಯತೆ ಇದೆ. ಬಂಗಾಳ ಕೊಲ್ಲಿಯಿಂದ ತಮಿಳುನಾಡು, ಪದುಚೇರಿ ಕರಾವಳಿಯ ಮೂಲಕ ದಕ್ಷಿಣ ರಾಜ್ಯಗಳನ್ನು ಪ್ರವೇಶಿಸಲಿರುವ ಈಶಾನ್ಯ ಮಾರುತಗಳು ಬಿರುಗಾಳಿ, ಗುಡುಗು ಸಹಿತ ಮಳೆ ಹೊತ್ತು ತರಲಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶುಕ್ರವಾರ ನಿರೀಕ್ಷಿತ ಈಶಾನ್ಯ ಮಾರುತಗಳು ತಮಿಳುನಾಡು ಮತ್ತು ಕರ್ನಾಟಕ ರಾಜ್ಯಕ್ಕೆ ಹೊಂದಿಕೊಂಡಿರುವ ಕೇರಳ, ಆಂಧ್ರ ಪ್ರದೇಶದ ದಕ್ಷಿಣ ಕರಾವಳಿ, ರಾಯಲಸೀಮಾ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿಗೆ ಮಳೆಯನ್ನು ಹೊತ್ತು ತರಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.ಬಂಗಾಳ ಕೊಲ್ಲಿಯಿಂದ 188 ಎಂ.ಎಂ ಮಳೆಯಾಗುವ ಸಾಧ್ಯತೆಯಿದೆ ಎಮದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ವಿಜ್ಞಾನಿ ಎಸ್.ಎಸ್. ಎಂ ಗವಾಸ್ಕರ್ ತಿಳಿಸಿದ್ದಾರೆ.

Edited By

Shruthi G

Reported By

Shruthi G

Comments