ಶಾಸಕ ಸಿ.ಪಿ.ಯೋಗೇಶ್ವರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅನಿತಾ ಕುಮಾರಸ್ವಾಮಿ

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಸುಣ್ಣಘಟ್ಟ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಜೆಡಿಎಸ್ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ದುಡಿಯುತ್ತಿದ್ದೇನೆ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ರಾಮನಗರ ಸೇರಿದಂತೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ಪ್ರವಾಸ ಮಾಡುತ್ತಿದ್ದೇನೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಅಂತಾ ಅವರು ಹೇಳಿದರು.
ಜೆಡಿಎಸ್ ನಾಯಕಿ ಅನಿತಾ ಕುಮಾರಸ್ವಾಮಿ ಅವರು ಮುಂದಿನ ತಿಂಗಳು ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಆ ಪಟ್ಟಿಯಲ್ಲಿ ಚನ್ನಪಟ್ಟಣದ ಅಭ್ಯರ್ಥಿ ಹೆಸರು ತಿಳಿಯಲಿದೆ ಎಂದು ಹೇಳಿದ್ದಾರೆ.ಇದೇ ವೇಳೆ ಅವರು ಜೆಡಿಎಸ್-ಕಾಂಗ್ರೆಸ್ ಒಳ ಒಪ್ಪಂದ ರಾಜಕೀಯ ಮಾಡುತ್ತಾರೆಂಬ ಶಾಸಕ ಸಿ.ಪಿ.ಯೋಗೇಶ್ವರ್ ಆರೋಪಕ್ಕೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಆ ರೀತಿಯ ರಾಜಕಾರಣ ಎಂದಿಗೂ ನಡೆದಿಲ್ಲ. ಚನ್ನಪಟ್ಟಣದಲ್ಲಿ ಜೆಡಿಎಸ್ ಪಕ್ಷ ಬಲಿಷ್ಟವಾಗಿದೆ. ಅವರು ಸುಮ್ಮನೆ ಹೇಳಿದ್ದಾರೆ ಅಷ್ಟೆ, ಅವರ ಮಾತು ಸತ್ಯವಲ್ಲ ಎಂದರು.
Comments