ವೈದ್ಯರ ಮುಷ್ಕರ : ಗರ್ಭಿಣಿಯ ಪರದಾಟ
ಗರ್ಭಿಣಿಯಾದಾಗಿನಿಂದಲೂ ಚೈತ್ರಾ ಅವರಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಯಲ್ಲಿ ಮುಷ್ಕರದ ಕಾರಣ ಚಿಕಿತ್ಸೆ ನೀಡಿಲ್ಲ. ಹಿಂದಿನ ಹೆರಿಗೆ ಸಂದರ್ಭದಲ್ಲಿ ಮಗು ಕಳೆದುಕೊಂಡಿದ್ದ ಚೈತ್ರಾ ಹಾಗೂ ಅವರ ಕುಟುಂಬದವರು ಆತಂಕಗೊಂಡಿದ್ದಾರೆ.
ಖಾಸಗಿ ವೈದ್ಯರ ಮುಷ್ಕರದಿಂದಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಗರ್ಭಿಣಿಯೊಬ್ಬರು ನರಳಾಡಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಹುನಗುಂದ ತಾಲ್ಲೂಕು ಚಿಕ್ಕಕೊಡಲಿ ತಾಂಡಾ ನಿವಾಸಿ ಚೈತ್ರಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕುಟುಂಬದವರು ಇಳಕಲ್ ಆಸ್ಪತ್ರೆಗೆ ಕರೆತಂದಿದ್ದಾರೆ. ಆಂಬುಲೆನ್ಸ್ ನಲ್ಲಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಕುಟುಂಬದವರು ಅಲೆದಾಡಿದ್ದಾರೆ. ಕೊನೆಗೆ ಸಾರ್ವಜನಿಕರು ಸಹಾಯಕ್ಕೆ ಬಂದಿದ್ದಾರೆ. ಬಾಗಲಕೋಟೆ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮತ್ತು ಸಿಬ್ಬಂದಿ ಸ್ಪಂದಿಸಿ, ಚೈತ್ರಾ ಅವರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದು, ಚೈತ್ರಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ.
Comments