ತಮಿಳುನಾಡಿನಲ್ಲಿ ವರುಣನ ಆರ್ಭಟ ಜೋರು

ಈಶಾನ್ಯ ಮಾರುತ ತಮಿಳುನಾಡಿನಲ್ಲಿ ಚುರುಕಾಗಿದ್ದು ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಚೆನ್ನೈ ಮತ್ತು ಉತ್ತರ ಕಾಂಚೀಪುರಂನ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಳೆದ 24 ಗಂಟೆಗಳಿಂದ ಶ್ರೀಲಂಕಾ ಕರಾವಳಿಯ ನೈರುತ್ಯ ಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ಪ್ರದೇಶ ಸೈಕ್ಲೋನ್ ಕೇಂದ್ರದ ನಿರ್ದೇಶಕ ಎಸ್. ಬಾಲಚಂದರ್ ತಿಳಿಸಿದ್ದಾರೆ.
ದಕ್ಷಿಣ ತಮಿಳುನಾಡು, ಉತ್ತರ ಕರಾವಳಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ತಮಿಳುನಾಡು ಮತ್ತು ಕಾವೇರಿ ನದಿ ಮುಖಜ ಭೂಮಿಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು , ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಮಳೆಯಿಂದ ಉಂಟಾಗುವ ಸಮಸ್ಯೆಗಳನ್ನು ನಿರ್ವಹಿಸಲು ತಮಿಳುನಾಡು ಸರ್ಕಾರ ಸನ್ನದ್ದವಾಗಿದೆ.
Comments