ಚೈನ್ನೈ ನಲ್ಲಿ ವರುಣನ ಅರ್ಭಟ
ಚೆನ್ನೈ: ಜಲಪ್ರವಾಹ ರೀತಿಯ ಪರಿಸ್ಥಿತಿ ಎದುರಿಸುತ್ತಿರುವ ಚೆನ್ನೈ ನಲ್ಲಿ ಈಗ ಮತ್ತಷ್ಟು ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ನ.4ರಂದು ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ.
ಚೆನ್ನೈ: ಜಲಪ್ರವಾಹ ರೀತಿಯ ಪರಿಸ್ಥಿತಿ ಎದುರಿಸುತ್ತಿರುವ ಚೆನ್ನೈ ನಲ್ಲಿ ಈಗ ಮತ್ತಷ್ಟು ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ನ.4ರಂದು ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ. ಚೆನ್ನೈನಲ್ಲಿ ಬರೋಬ್ಬರಿ 55 ಮಿಮೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಸಂಭವಿಸಿರುವ ಸಾವಿನ ಸಂಖ್ಯೆ 12ಕ್ಕೆ ಏರಿದೆ. ಖಾಸಗಿ ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇಂದಿನಿಂದ ಮತ್ತಷ್ಟು ಮಳೆ ಹೆಚ್ಚಾಗುವ ನಿರೀಕ್ಷೆ ಇದ್ದು, ಶನಿವಾರದಂದು ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.ನ. 3ರಂದು ಮುಖ್ಯಮಂತ್ರಿ ಇ. ಪಳನಿಸ್ವಾಮಿ ಚೆನ್ನೈ ನ ಜಲಾವೃತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ವಿಮಾನ ಹಾರಾಟ ಯಥಾಸ್ಥಿತಿಯಲ್ಲಿದ್ದು ಸಾರ್ವಜನಿಕರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಸರ್ಕಾರ ತಿಳಿಸಿದೆ.
Comments