ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ : ಎಚ್.ಡಿ.ಕುಮಾರಸ್ವಾಮಿ

ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್, ಬಿಜೆಪಿ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳು. ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಸಿಎಂ ಸಿದ್ರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕನಸುಗಳು ಛಿದ್ರವಾಗಲಿವೆ ಎಂದು ತಿಳಿಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಜಯಗಳಿಸಿ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ರಾಜ್ಯದಾದ್ಯಂತ ಜನತೆ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳ ವಿರುದ್ಧ ಭ್ರಮನಿರಸನಗೊಂಡಿದ್ದಾರೆ. ಜೆಡಿಎಸ್ ಪಕ್ಷ ಅಧಿಕಾರದಲ್ಲಿದ್ದಾಗ ಮಾಡಿದ ಜನಪರ ಕಾರ್ಯಗಳನ್ನು ಮೆಲಕುಹಾಕುತ್ತಿದ್ದಾರೆ ಎಂದರು.
ಕಾಂಗ್ರೆಸ್, ಬಿಜೆಪಿ ಸರಕಾರಗಳ ಭ್ರಷ್ಟಾಚಾರವನ್ನು ಜನತೆ ನೋಡಿದ್ದಾರೆ. ಮತ್ತೆ ಇಂತಹ ಸರಕಾರ ಅಧಿಕಾರಕ್ಕೆ ತರುವುದು ಬೇಡವೆಂದು ನಿರ್ಧರಿಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
Comments