ರವೀಂದ್ರ ಶ್ರೀಕಂಠಯ್ಯರವರನ್ನು ಜೆಡಿಎಸ್ ಗೆ ಸ್ವಾಗತ ನೀಡಿದ ಎಚ್ ಡಿಕೆ

ಭಾನುವಾರ ಎಚ್.ಡಿ.ಕುಮಾರಸ್ವಾಮಿ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆಯಲ್ಲಿರುವ ರವೀಂದ್ರ ಶ್ರೀಕಂಠಯ್ಯ ಅವರ ಮನೆಗೆ ಭೇಟಿ ನೀಡಿದ್ದರು. ರವೀಂದ್ರ ಶ್ರೀಕಂಠಯ್ಯ ಅವರನ್ನು ಪಕ್ಷ ಸೇರುವಂತೆ ಆಹ್ವಾನಿಸಿದರು. ಈ ಮೂಲಕ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ಹಾಕಿ ಪಕ್ಷದಿಂದ ಅಮಾನಾತುಗೊಂಡಿರುವ ಶಾಸಕ ರಮೇಶ ಬಂಡಿಸಿದ್ದೇಗೌಡ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.
ಸಿ.ಪಿ.ಯೋಗೇಶ್ವರ ಬಿಜೆಪಿ ಸೇರ್ಪಡೆ ಬಳಿಕ ರಾಮನಗರದ ರಾಜಕೀಯ ರಂಗೇರಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ರವೀಂದ್ರ ಶ್ರೀಕಂಠಯ್ಯ ಅವರನ್ನು ಪಕ್ಷಕ್ಕೆ ಆಹ್ವಾನಿಸಿಸುವ ಮೂಲಕ ಮಂಡ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.
ಶಾಸಕ ರಮೇಶ ಬಂಡಿಸಿದ್ದೇಗೌಡ ಅವರು ಸಹ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದವರು. ಆದರೆ, ಕುಮಾರಸ್ವಾಮಿ ರವೀಂದ್ರ ಶ್ರೀಕಂಠಯ್ಯ ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ರವೀಂದ್ರ ಶ್ರೀಕಂಠಯ್ಯ ಅವರ ನೂರಾರು ಬೆಂಬಲಿಗರು ಎಚ್.ಡಿ.ಕುಮಾರಸ್ವಾಮಿ ಅವರನ್ನು ಸ್ವಾಗತಿಸಿದರು.ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಬಲಿಗರಾದ ರವೀಂದ್ರ ಶ್ರೀಕಂಠಯ್ಯ ಅವರು ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಶ್ರೀರಂಗಪಟ್ಟಣ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಅವರು ಜೆಡಿಎಸ್ ಸೇರಿದರೆ ಮಂಡ್ಯ ಜಿಲ್ಲೆಯಲ್ಲಿ ಪಕ್ಷ ಬಲಿಷ್ಠವಾಗಲಿದೆ...
ರವೀಂದ್ರ ಶ್ರೀಕಂಠಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಕುಮಾರಸ್ವಾಮಿ, 'ಹಿಂದೆಯೇ ರವೀಂದ್ರ ಅವರನ್ನು ಪಕ್ಷಕ್ಕೆ ಆಹ್ವಾನಿಸಬೇಕಿತ್ತು. ಆರೋಗ್ಯ ಸಮಸ್ಯೆ ಹಿನ್ನಲೆಯಲ್ಲಿ ಸಾಧ್ಯವಾಗಲಿಲ್ಲ. ಈಗ ಕಾಲ ಕೂಡಿಬಂದಿದೆ' ಎಂದು ಹೇಳಿದರು.ಕಾಂಗ್ರೆಸ್ ತೊರೆದಿರುವ ರವೀಂದ್ರ ಶ್ರೀಕಂಠಯ್ಯ ಅವರು ಜೆಡಿಎಸ್ ಸೇರಿದರೆ 2018ರ ಚುನಾವಣೆಯಲ್ಲಿ ಅವರಿಗೆ ಶ್ರೀರಂಗಪಟ್ಟಣ ಕ್ಷೇತ್ರದಿಂದ ಟಿಕೆಟ್ ನೀಡಲಾಗುತ್ತದೆ ಎಂಬುದು ಸದಸ್ಯದ ಸುದ್ದಿ. ರವೀಂದ್ರ ಶ್ರೀಕಂಠಯ್ಯ ಅವರು ಪಕ್ಷ ಸೇರುವ ಕುರಿತು ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.
Comments