ನೇಕಾರರ 50,000 ರೂ ವರೆಗೆ ಸಾಲ ಮನ್ನಾ : ಸಿಎಂ ಘೋಷಣೆ

ರೈತರಿಗೆ ಬೆಳೆ ಸಾಲ ಮನ್ನಾ ಮಾಡಿದ ಮಾದರಿಯಲ್ಲೇ, ನೇಕಾರರಿಗೂ 50,000 ರೂ ವರೆಗಿನ ಸಾಲ ಮನ್ನಾ ಮಾಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಮ್ಮೇಳನದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಸರ್ಕಾರದ ಈ ತೀರ್ಮಾನದಿಂದ ಒಂಭತ್ತು ಸಾವಿರಕ್ಕೂ ಹೆಚ್ಚು ನೇಕಾರರಿಗೆ ಲಾಭವಾಗಲಿದೆ. ಇದರಿಂದ ರಾಜ್ಯ ಬೊಕ್ಕಸಕ್ಕೆ 52 ಕೋಟಿ ರೂ ಹೊರೆ ಬೀಳಲಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.
Comments