ಗೌರಿ ಲಂಕೇಶ್ ಹತ್ಯೆಗೈದವರ ಖಚಿತ ಮಾಹಿತಿ ಲಭ್ಯ :ರಾಮಲಿಂಗಾರೆಡ್ಡಿ

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಇಂದು ಆಯೋಜಿಸಲಾಗಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ರಾಮಲಿಂಗಾರೆಡ್ಡಿ, ಗೌರಿ ಲಂಕೇಶ್ ಹಂತಕರ ಪತ್ತೆಗೆ ರಚಿಸಲಾಗಿದ್ದ ವಿಶೇಷ ತನಿಖಾ ದಳದೊಂದಿಗೆ ತಾವು ಈ ಕುರಿತು ಮಾತನಾಡಿದ್ದು, ಹಂತಕರನ್ನು ಶೀಘ್ರದಲ್ಲೇ ಬಂಧಿಸುವುದು ಖಚಿತವೆಂದರು.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೈದವರ ಕುರಿತು ಖಚಿತ ಮಾಹಿತಿ ಲಭ್ಯವಾಗಿದ್ದು, ಶೀಘ್ರದಲ್ಲೇ ಅವರುಗಳನ್ನು ಬಂಧಿಸಲಾಗುವುದೆಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.ಈ ಹಂತದಲ್ಲಿ ತಾವು ಹೆಚ್ಚಿನ ಮಾಹಿತಿ ಬಹಿರಂಗಪಡಿಸಲು ಇಚ್ಚಿಸುವುದಿಲ್ಲವೆಂದು ಹೇಳಿದ ಗೃಹ ಸಚಿವರು, ಹಂತಕರು ಯಾರೆಂಬ ಸಂಗತಿ ಎಸ್‌ಐಟಿ ತನಿಖೆಯಲ್ಲಿ ಗೊತ್ತಾಗಿದೆ ಎಂದು ಹೇಳಿದ್ದಾರೆ.
Comments