ಇಂದು ದೇಶಾದ್ಯಂತ ಮಕ್ಕಳ ದಿನಾಚರಣೆ ಶುಭಾಶಯ ಕೋರಿದ ಗಣ್ಯರು

ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಡಾ.ಮನಮೋಹನ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಮಕ್ಕಳ ದಿನಾಚರಣೆ ಶುಭಾಶಯ ಕೋರಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ವಿವಿಧ ಪಕ್ಷಗಳ ಮುಖಂಡರು ಸಹ ಮಕ್ಕಳ ದಿನಾಚರಣೆ ಸಂದರ್ಭದಲ್ಲಿ ಶುಭಾಶಯ ಸಲ್ಲಿಸಿದ್ದಾರೆ. ನೆಹರುರವರ 128ನೇ ಜನ್ಮ ದಿನಾಚರಣೆ ಅಂಗವಾಗಿ ಅವರ ಗುಣಗಾನ ಮಾಡಿದ್ದಾರೆ. ಏಷಿಯನ್ ಶೃಂಗಸಭೆಗಾಗಿ ಫಿಲಿಪೈನ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಟ್ವಿಟ್ಟರ್ ಮೂಲಕ ಭಾರತದ ಪ್ರಥಮ ಪ್ರಧಾನಮಂತ್ರಿಯನ್ನು ಸ್ಮರಿಸಿ, ಮಕ್ಕಳ ದಿನಾಚರಣೆ ಶುಭಾಶಯ ಸಲ್ಲಿಸಿದ್ದಾರೆ.
Comments