ಬೆಳಗಾವಿಯಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ನಡುವೆಯೇ ಜೆಡಿಎಸ್ ಶಕ್ತಿ ಪ್ರದರ್ಶನ ಮಾಡುತ್ತಿದೆ. ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಎ.ಎಸ್.ಪಾಟೀಲ್ ನಡಹಳ್ಳಿ ಆರಂಭಿಸಿರುವ 'ಉತ್ತರ ಕರ್ನಾಟಕ ಕನ್ನಡಿಗರ ಸ್ವಾಭಿಮಾನಿ ಯಾತ್ರೆ'ಯ ಸಮಾರೋಪ ಸಮಾರಂಭ, ಎಚ್.ಡಿ.ಕುಮಾರಸ್ವಾಮಿ ಅವರು ಆರಂಭಿಸಿರುವ 'ಕುಮಾರಪರ್ವ 2018' ಯಾತ್ರೆಯ ಸಮಾವೇಶ ಒಟ್ಟಿಗೆ ನಡೆಯುತ್ತಿದೆ.
ಎಚ್.ಡಿ.ಕುಮಾರಸ್ವಾಮಿ ಅವರು ಕರ್ನಾಟಕ ವಿಕಾಸ ವಾಹಿನಿ ಬಸ್ ಮೂಲಕ ಧಾರವಾಡದಿಂದ ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ. ಧಾರವಾಡದ ನರೇಂದ್ರ ಬೈಪಾಸ್‌ನಿಂದ ಆರಂಭಗೊಂಡ ಯಾತ್ರೆ ಬೆಳಗಾವಿಗೆ ತಲುಪಿದೆ.ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಜೆಡಿಎಸ್ ಸಮಾವೇಶ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡಿರುವ ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಸಮಾವೇಶದಲ್ಲಿ ಜೆಡಿಎಸ್ ಸೇರಲಿದ್ದಾರೆ.ಯಾತ್ರೆ ಆರಂಭಿಸುವುದಕ್ಕೂ ಮುನ್ನ ಧಾರವಾಡದಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, 'ಬೆಳಗಾವಿಯಲ್ಲಿ ಅಧಿವೇಶನ ಗದ್ದಲವಿಲ್ಲದಂತೆ ನಡೆಯಲು ಎಲ್ಲಾ ಪಕ್ಷದ ಶಾಸಕರು ಸಹಕಾರ ನೀಡಬೇಕು' ಎಂದರು.
Comments