ರಾಷ್ಟ್ರೀಯ ಪಕ್ಷಗಳ ಭವಿಷ್ಯ ನುಡಿದ ಮಾಜಿ ಪ್ರಧಾನಿ ದೇವೇಗೌಡ್ರು

ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಎರಡೂ ರಾಷ್ಟ್ರೀಯ ಪಕ್ಷಗಳ ಕುರಿತು ಗುಜರಾತ್ ಚುನಾವಣೆಯಲ್ಲಿ ಹಣದ ಹೊಳೆಯನ್ನೇ ಹರಿಸುತ್ತಿವೆ. ಅವುಗಳಿಗೆ ಅಭದ್ರತೆ ಕಾಡುತ್ತಿರುವ ಕಾರಣದಿಂದಲೇ ಈ ರೀತಿಯ ಆಮಿಷವೊಡ್ಡುತ್ತಿವೆ. ಆದ್ದರಿಂದ ಈ ಚುನಾವಣೆಯ ಫಲಿತಾಂಶ ಖಂಡಿತವಾಗಿ ರಾಷ್ಟ್ರ ರಾಜಕೀಯದ ಮೇಲೆ ಪರಿಣಾಮ ಬೀರಲಿದೆ ಎಂದು ಅಭಿಪ್ರಾಯಪಟ್ಟರು.
ಗುಜರಾತ್ ಮತ್ತು ಹಿಮಾಚಲಪ್ರದೇಶ ರಾಜ್ಯಗಳ ಚುನಾವಣೆ ನಂತರ ರಾಜ್ಯ ಮತ್ತು ದೇಶದಲ್ಲಿ ಸಾಕಷ್ಟು ರಾಜಕೀಯ ಮಾರ್ಪಾಟುಗಳು ನಡೆಯುವ ನಿರೀಕ್ಷೆ ಇದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.ಕರ್ನಾಟಕದಲ್ಲಿಯೂ ಸಾಕಷ್ಟು ಬದಲಾವಣೆಗಳಾಗಲಿವೆ. ಪಕ್ಷ ಬದಲಿಸುವವರ ಸಂಖ್ಯೆ ಹೆಚ್ಚಲಿದೆ. ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಯಾತ್ರೆಗೆ ಅಭೂತಪೂರ್ವ ಬೆಂಬಲ ಕಂಡು ಬರುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಬಗ್ಗೆ ಭ್ರಮನಿರಸನಗೊಂಡಿರುವ ಜನ ಈ ಬಾರಿ ಜೆಡಿಎಸ್‌ಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ. ಹಳೇಮೈಸೂರು ಭಾಗದ ಜೊತೆಗೆ ಉತ್ತರ ಕರ್ನಾಟಕದಲ್ಲಿಯೂ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗಿದೆ. ಗುರುವಾರ ಹುಬ್ಬಳಿಯಲ್ಲೇ ಜೆಡಿಎಸ್ ರಾಜ್ಯಕಾರ್ಯಕಾರಿಣಿ ಸಭೆ ಕರೆಯಲಾಗಿದೆ. ಜೆಡಿಎಸ್ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ತಾರತಮ್ಯ ಮಾಡದೆ ಉತ್ತರ ಕರ್ನಾಟಕದ ಅಭಿವೃದ್ಧಿಗೂ ಕೆಲಸ ಮಾಡಿದೆ. ಅದನ್ನು ಮನದಲ್ಲಿಟ್ಟುಕೊಂಡು ಈ ಬಾರಿ ಇಡೀ ರಾಜ್ಯದ ಜನತೆ ಜೆಡಿಎಸ್ ಅಧಿಕಾರಕ್ಕೆ ತರಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
Comments