ಪ್ರತಿಭಟನೆಯ ಎಚ್ಚರಿಕೆ ಗಂಟೆ ಭಾರಿಸಿದ ಗೌಡರು
ಕೊಡಿಗೇಹಳ್ಳಿ ರೈಲ್ವೆಗೇಟ್ ಕೆಳಸೇತುವೆ ಕಾಮಗಾರಿ ನನೆಗುದಿಗೆ ಬಿದ್ದಿರುವುದರಿಂದ ಆ ಭಾಗದ ಜನರು ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಶೀಘ್ರದಲ್ಲೇ ಪ್ರತಿಭಟನೆ ನಡೆಸುತ್ತೇವೆ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಎಚ್ಚರಿಸಿದರು.
ಕೊಡಿಗೇಹಳ್ಳಿ ಗೇಟ್ ಸಮೀಪದಲ್ಲಿ ಬ್ಯಾಟರಾಯನಪುರ ಕ್ಷೇತ್ರದ ಜೆಡಿಎಸ್ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷಗಳ ಆಡಳಿತದಿಂದ ಅನುಭವಿಸಿರುವ ನೋವುಗಳಿಂದ ಮುಕ್ತಿ ಸಿಗಲು ಮತ್ತು ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವ ಶಕ್ತಿ ಪ್ರಾದೇಶಿಕ ಪಕ್ಷಕ್ಕೆ ಮಾತ್ರ ಇದೆ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು’ ಎಂದರು.
Comments