ರಾಜಶೇಖರ ಕೋಟಿ ಅವರ ನಿಧನಕ್ಕೆ ಕಂಬನಿ ಮಿಡಿದ ಕುಮಾರಸ್ವಾಮಿ

23 Nov 2017 3:59 PM | General
193 Report

ಹಿರಿಯ ಪತ್ರಕರ್ತ ರಾಜಶೇಖರ ಕೋಟಿ ಅವರು ಬೆಳಗಿನ ಜಾವ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಮೈಸೂರಿನ ಆಂದೋಲನ ಪತ್ರಿಕೆಯ ಸಂಪಾದಕರಾಗಿದ್ದರು. ದೇವರು ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುವುದಾಗಿ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್‌ಡಿಕೆ ಕಂಬನಿ ಮಿಡಿದಿದ್ದಾರೆ.

ಕೋಟಿ ಅವರ ನಿಧನ ಇಡೀ ರಾಜ್ಯದ ಮಾಧ್ಯಮ ವಲಯಕ್ಕೆ ತೀವ್ರ ಆಘಾತವನ್ನುಂಟುಮಾಡಿದೆ. ಮಾಧ್ಯಮ ಕ್ಷೇತ್ರ ಓರ್ವ ಧೀಮಂತ, ಸಹೃದಯಿ ಪತ್ರಕರ್ತನನ್ನು ಕಳೆದುಕೊಂಡಿದ್ದು ದುರಂತ ಎಂದು ಜೆಡಿಎಸ್‌‌ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ

Edited By

Hema Latha

Reported By

Madhu shree

Comments