ಆಧಾರ್ ಜೋಡಣೆ ಮಾರ್ಚ್ 31ರವರೆಗೆ ವಿಸ್ತರಿಸಲು ಸಿದ್ಧ : ಕೇಂದ್ರಸರ್ಕಾರ

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ, ವಿವಿಧ ಯೋಜನೆಗಳ ಜೊತೆ ಆಧಾರ್ ಸಂಖ್ಯೆಯನ್ನು ಜೋಡಿಸುವ ಅವಧಿಯನ್ನು ಮುಂದಿನ ವರ್ಷ ಮಾರ್ಚ್ 31ರವರೆಗೆ ವಿಸ್ತರಿಸಲು ಸಿದ್ಧ ಎಂದು ಹೇಳಿದೆ.
ವಿವಿಧ ಅಭಿವೃದ್ಧಿ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಲು ಆಧಾರ್ ಸಂಖ್ಯೆಯನ್ನು ಕಡ್ಡಾಯ ಮಾಡಬಾರದು ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿದ್ದರು. ಮೊಬೈಲ್ ಸಂಖ್ಯೆಗೆ ಆಧಾರ್ ನ್ನು ಜೋಡಿಸಬೇಕೆಂಬ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಕಳೆದ 13ರಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಇಂತಹ ನೂರಾರು ಅರ್ಜಿಗಳು ನ್ಯಾಯಾಲಯದಲ್ಲಿ ಇತ್ಯರ್ಥವಾಗದೆ ಉಳಿದುಕೊಂಡಿದೆ ಎಂದು ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು. ಪ್ರಸ್ತುತ ಬ್ಯಾಂಕ್ ಗ್ರಾಹಕರ ಬ್ಯಾಂಕ್ ಖಾತೆಗಳ ಜೊತೆ ಆಧಾರ್ ಸಂಖ್ಯೆಯನ್ನು ಜೋಡಿಸಲು ಇರುವ ಅಂತಿಮ ದಿನಾಂಕ ಡಿಸೆಂಬರ್ 31 ಮತ್ತು ಮೊಬೈಲ್ ಸಂಖ್ಯೆಯನ್ನು ಜೋಡಿಸಲು ಮುಂದಿನ ವರ್ಷ ಫೆಬ್ರವರಿ 6 ಆಗಿದೆ.
Comments