ರಾಜ್ಯ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘ ಅಹೋರಾತ್ರಿ ಧರಣಿ

ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಕಾರ್ಮಿಕರು, ಪ್ರಮುಖವಾಗಿ ಕಾರ್ಮಿಕ ಮಂಡಳಿಯಲ್ಲಿ ಸಂಗ್ರಹವಾಗಿರುವ 6 ಸಾವಿರ ಕೋಟಿ ಸೆಸ್ ಹಣವನ್ನು ರಾಜ್ಯ ಸರ್ಕಾರ ದುರುಪಯೋಗ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಕಾರ್ಮಿಕ ಕಲ್ಯಾಣಕ್ಕೆ ಹಣವನ್ನು ಬಳಸದೇ ಸರ್ಕಾರ ಜನಪ್ರಿಯ ಯೋಜನೆಗಳಿಗೆ ಬಳಸುತ್ತಿದೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.
ವಿವಿಧ ಬೇಡಿಕೆ ಈಡೇರಿಕೆ ಹಾಗೂ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ರಾಜ್ಯ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘ ಅಹೋರಾತ್ರಿ ಧರಣಿ ನಡೆಸಿದ್ದಾರೆ. ಕಟ್ಟಡ ಕಾರ್ಮಿಕರಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದಿರುವ ಅವರು, ಅಷ್ಟೇ ಅಲ್ಲದೇ ಕಾರ್ಮಿಕರ ಮದುವೆ ಹಾಗೂ ಹೆರಿಗೆ ಧನ ಸಹಾಯವನ್ನು ಹೆಚ್ಚಿಸಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ.
Comments