ಜಾನುವಾರು ಮಾರಾಟ ನಿಷೇಧ ಅಧಿಸೂಚನೆ ಹಿಂಪಡೆಯಲು ಕೇಂದ್ರ ಸರ್ಕಾರದ ಚಿಂತನೆ

ಕೇಂದ್ರ ಸರ್ಕಾರವು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ (ಜಾನುವಾರು ಮಾರುಕಟ್ಟೆ ನಿಯಂತ್ರಣ) ಕಾಯ್ಕೆ 2017 ಕ್ಕೆ ತಿದ್ದುಪಡಿ ತರಲು ಮುಂದಾಗಿತ್ತು. ಈ ಸಂಬಂಧ ಕಳೆದ ಮೇ 23 ರಂದು ಸಚಿವಾಲಯ ಎಲ್ಲಾ ರಾಜ್ಯಗಳಿಗೆ ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ಸೂಚಿಸಿತ್ತು. ಎಲ್ಲಾ ರಾಜ್ಯಗಳು ವರದಿಯನ್ನು ನೀಡಿದ ನಂತರ ಕೇಂದ್ರ ಈ ಅಧಿಸೂಚನೆ ಹಿಂಪಡೆಯಲು ಮುಂದಾಗಿದೆ ಎಂದು ತಿಳಿದು ಬಂದಿದೆ.
ಜಾನುವಾರು ಮಾರಕಟ್ಟೆಯಲ್ಲಿ ಜಾನುವಾರುಗಳನ್ನು ಕಸಾಯಿಖಾನೆಗಳಿಗೆ ಮಾರಾಟ ಮಾಡಬಾರದು. ಜಾನುವಾರುಗಳನ್ನು ಕೃಷಿ ಉದ್ದೇಶಕ್ಕೆ ಮಾತ್ರ ಮಾರಾಟ ಮಾಡಬೇಕು ಎಂದು ಕಳೆದ ಮೇ ತಿಂಗಳಿನಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಕೇಂದ್ರದ ಅಧಿಸೂಚನೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಅಧಿಸೂಚನೆಯಲ್ಲಿ ಹಲವು ನ್ಯೂನತೆಗಳಿದ್ದು, ಪರಿಷ್ಕೃತ ಅಧಿಸೂಚನೆ ಹೊರಡಿಸಲು ಚಿಂತಿಸಲಾಗಿದೆ. ಹೀಗಾಗಿ ಅಧಿಸೂಚನೆಯನ್ನು ಹಿಂಪಡೆಯಲಾಗುತ್ತಿದೆ ಎಂದು ಕಾನೂನು ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ ಎಂದು ಪರಿಸರ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
Comments