ಯುವಕರ ನಡಿಗೆ ಕುಮಾರಣ್ಣನ ಕಡೆಗೆ

01 Dec 2017 10:14 AM | General
363 Report

ರಾಜ್ಯದ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ವಿಫಲವಾಗಿವೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಆರೋಪಿಸಿದ್ದಾರೆ.

ಪಟ್ಟಣದ ಹಳೇ ಬಸ್‌ನಿಲ್ದಾಣದ ಆವರಣದಲ್ಲಿ ‘ಯುವಕರ ನಡಿಗೆ ಕುಮಾರಣ್ಣನ ಕಡೆಗೆ’ ಯುವ ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಜ್ವಲ್ ರೇವಣ್ ಅವರು,ರೈತರ ಸಮಸ್ಯೆ ನಿವಾರಣೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪ್ರಾದೇಶಿಕ ಪಕ್ಷ ಹಗಲಿರುಳು ಶ್ರಮಿಸುತ್ತಿದ್ದು, ಪಕ್ಷದ ಬೆಂಬಲಕ್ಕೆ ರಾಜ್ಯ ಜನರು ನಿಲ್ಲುವರೆಂಬ ವಿಶ್ವಾಸ ನನಗಿದೆ ಎಂದರು.

ನಮ್ಮ ಕುಟುಂಬದಲ್ಲಿ ಯಾವುದೇ ಒಡಕಿಲ್ಲ. ಇದು ವಿರೋಧಿಗಳ ಊಹಾಪೋಹಾವಷ್ಟೆ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿಸುವುದಕ್ಕೆ ನಮ್ಮ ಕುಟುಂಬದ ಸಹಮತವಿದೆ. ಕಾರ್ಯಕರ್ತರು ಈ ಬಗ್ಗೆ ಗೊಂದಲಗೊಳ್ಳುವುದು ಬೇಡ ಎಂದು ರೇವಣ್ಣ ಮನವಿ ಮಾಡಿದರು.

ನಾಗಮಂಗಲದಲ್ಲಿ ನಮ್ಮಿಂದ ಅಧಿಕಾರವನ್ನು ಉಂಡು ಬೆಳೆದವರು ಬೆನ್ನಿಗೆ ಚೂರಿ ಹಾಕಿ ಹೋದರು. ಆದರೆ, ಅಪ್ಪಾಜಿಗೌಡ, ಶ್ರೀಕಂಠೇಗೌಡರು ಸಂಕಷ್ಟದ ಸಂದರ್ಭದಲ್ಲಿ ದೇವೇಗೌಡರಿಗೆ ಬೆನ್ನಲುಬಾಗಿ ನಿಂತಿದದ್ದನ್ನು ಎಂದಿಗೂ ಮರೆಯುವುದಿಲ್ಲ. ಈಗ ಸುರೇಶಗೌಡ ಹಾಗೂ ಎಲ್.ಆರ್.ಶಿವರಾಮೇಗೌಡ ಅವರ ಆಗಮನದಿಂದಾಗಿ ನಾಗಮಂಗಲದಲ್ಲಿ ಜೆಡಿಎಸ್ ಪಕ್ಷ ಇನ್ನಷ್ಟು ಶಕ್ತಿಶಾಲಿಯಾಗಿದೆ ಎಂದು ಪ್ರಜ್ವಲ್ ಹೇಳಿದರು.

 

Edited By

Shruthi G

Reported By

Shruthi G

Comments